Samanvaya Trust Shivamogga ಪರಿಸದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ವಿನೋಬನಗರದ ನಿವಾಸಿ ಉಜ್ವಲಾ ರವಿ ಕುಟುಂಬಕ್ಕೆ ಸಮನ್ವಯ ಟ್ರಸ್ಟ್ ವತಿಯಿಂದ ಪರಿಸರ ಕುಟುಂಬ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಸಮನ್ವಯ ಟ್ರಸ್ಟ್ ನೇತೃತ್ವದಲ್ಲಿ ಹಾಗೂ ಐಎಎಸ್ ಅಧಿಕಾರಿ ಕೆ.ಎ.ದಯಾನಂದ ಮಾರ್ಗದರ್ಶನದಲ್ಲಿ ಶಿವಮೊಗ್ಗದಲ್ಲಿ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಪರಿಸರ ಪ್ರಶಸ್ತಿ ನೀಡುವ ಮೂಲಕ ಗೌರವಿಸುವ ಕೆಲಸವನ್ನು ಟ್ರಸ್ಟ್ ವತಿಯಿಂದ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಟ್ರಸ್ಟ್ ವತಿಯಿಂದ ನೀಡುತ್ತಿರುವ 50ನೇ ಪರಿಸರ ಕುಟುಂಬ ಪ್ರಶಸ್ತಿ ಇದಾಗಿದೆ.
ಉಜ್ವಲಾ ರವಿ ಕುಟುಂಬದವರು ನಿವೇಶನದ ಅರ್ಧಭಾಗದಲ್ಲಿ ಮನೆ ಕಟ್ಟಿಕೊಂಡು ಇನ್ನುಳಿದ ಅರ್ಧ ಭಾಗದಲ್ಲಿ ಪರಿಸರಕ್ಕೆ ಪೂರಕವಾಗಿ ಹಾಗೂ ಪಕ್ಷಿಗಳಿಗೆ ಅನುಕೂಲ ಆಗುವಂತೆ ಸಸಿಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದಾರೆ. ಉಜ್ವಲಾ ರವಿ ಅವರ ಕುಟುಂಬಕ್ಕೆ ಪ್ರಶಸ್ತಿ ವಿತರಿಸಲಾಯಿತು.
Samanvaya Trust Shivamogga ಮನೆ ಆವರಣದಲ್ಲಿ ಸಸ್ಯಗಳನ್ನು ಬೆಳೆದು ಪೋಷಿಸುತ್ತಿದ್ದಾರೆ. ತ್ಯಾಜ್ಯ ನಿರ್ವಹಣೆಯನ್ನು ಮಾಡುತ್ತಾರೆ. ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸಿ ಬಳಕೆ ಮಾಡುತ್ತಾರೆ. ಪ್ಲಾಸ್ಟಿಕ್ ಬಳಕೆ ಮಾಡುವುದಿಲ್ಲ. ಶಿವಮೊಗ್ಗ ನಗರದ ಜೆಎನ್‌ಎನ್‌ಸಿಇ ಕಾಲೇಜಿನ ಲೆಕ್ಚರ್ ಉಜ್ವಲಾ ರವಿ ಕುಟುಂಬದ ಪರಿಸರ ಕಾಳಜಿ ಗುರುತಿಸಿ ಸಮನ್ವಯ ಟ್ರಸ್ಟ್ ಪರಿಸರ ಪ್ರಶಸ್ತಿ ನೀಡಿ ಅಭಿನಂದಿಸಿದೆ.
ಸಮನ್ವಯ ಟ್ರಸ್ಟ್ ಕಾರ್ಯ ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ನೇತೃತ್ವದ ತಂಡವು ಶಿವಮೊಗ್ಗದ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಗೌರವಿಸುವ ವಿಶೇಷ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುತ್ತಿದೆ. ಪರಿಸರದ ಕಾಳಜಿಯನ್ನು ಮನೆ ಮನೆಗೆ ತಲುಪಿಸುವ ಆಶಯದಿಂದ ರಾಜ್ಯದಲ್ಲಿಯೇ ನಡೆಸುತ್ತಿರುವ ವಿಶೇಷ ಪ್ರಯತ್ನ ಇದಾಗಿದೆ.
ಪರಿಸರ ಕುಟುಂಬ ಪ್ರಶಸ್ತಿ ನೀಡುವ ಸಂದರ್ಭದಲ್ಲಿ ಸಮನ್ವಯ ಟ್ರಸ್ಟ್ ನ ಸಮನ್ವಯ ಕಾಶಿ, ಉಜ್ವಲಾ ರವಿ ಕುಟುಂಬದ ಸದಸ್ಯರು, ಸಮನ್ವಯ ಟ್ರಸ್ಟ್ ಸಲಹಾ ಸಮಿತಿ ಸದಸ್ಯ ಯತೀಶ್ ಬಿ ಎನ್ ಉಪಸ್ಥಿತರಿದ್ದರು.
Samanvaya Trust Shivamogga “ಸಮನ್ವಯ”ದಿಂದ ಉಜ್ವಲಾ ರವಿ ಅವರಿಗೆ “ಪರಿಸರ ಕುಟುಂಬ “ಪ್ರಶಸ್ತಿ
Date: