JDS ಅಲ್ಪಸಂಖ್ಯಾತ ಸಮುದಾಯವನ್ನು ಓಟ್‌ಬ್ಯಾಂಕ್ ಹೆಸರಿನಲ್ಲಿ ವಿಭಜನೆ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ಧೋರಣೆ ಜೆಡಿಎಸ್ ರಾಜ್ಯ ಕಾರ್ಯದರ್ಶಿ ರಾಕೇಶ್ ಡಿಸೋಜ ಖಂಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಾಮಗಾರಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು ಹೊರಟಿರುವ ತುಷ್ಟೀಕರಣದ ಧೋರಣೆಯ ನಿರ್ಧಾರ ಕೈಬಿಡಬೇಕೆಂದು ಆಗ್ರಹಿಸಿದ್ದಾರಲ್ಲದೇ, ಅಲ್ಪಸಂಖ್ಯಾತರಲ್ಲಿ ತಾರತಮ್ಯ ಧೋರಣ ಸಲ್ಲದು ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರಕ್ಕೆ ಅಲ್ಪಸಂಖ್ಯಾತರು ಎಂದರೆ ಮುಸ್ಲಿಮರು ಮಾತ್ರ ಕಾಣುತ್ತಾರೆ ಹೊರತು ನೈಜ ಅಲ್ಲಸಂಖ್ಯಾತರಾದ ಕ್ರೈಸ್ತ, ಬೌದ್ಧ, ಜೈನ ಸೇರಿದಂತೆ ಇನ್ನಿತರ ಸಮುದಾಯಗಳು ಕಾಣುವುದೇ ಇಲ್ಲ, ಓಟ್ ಬ್ಯಾಂಕ್ ಆಧಾರದಲ್ಲಿ ಬಹುಸಂಖ್ಯೆ ಹೊಂದಿರುವ ಮುಸ್ಲಿಂ ಸಮುದಾಯಕ್ಕೆ ಮಾತ್ರ ಆದ್ಯತೆ ನೀಡುವುದು ಖಂಡನೀಯ ಎಂದಿದ್ದಾರೆ.
JDS ದಶಕಗಳ ಹಿಂದೆ ಅಲ್ಪಸಂಖ್ಯಾತರಾಗಿದ್ದ ಮುಸ್ಲಿಮರು ಇಂದು ಸಂಘಟಿತವಾಗಿ ಮುಂಚೂಣಿಯಲ್ಲಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಓಟ್ ಬ್ಯಾಂಕ್ ಆಗಿ ಗುರುತಿಸಿಕೊಂಡಿರುವ ಕಾರಣಕ್ಕೆ ಮುಸ್ಲಿಮರಿಗೆ ಮಾತ್ರ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಧರ್ಮದ ಹೆಸರಿನಲ್ಲಿ ಉದ್ಯೋಗ ಹಾಗೂ ಶೈಕ್ಷಣಿಕ ಮೀಸಲಾತಿ ನೀಡಲಾಗಿದೆ, ಇದೀಗ ಸರ್ಕಾರಿ ಕಾಮಗಾರಿಗಳಲ್ಲೂ ಶೇ. ೪ ರಷ್ಟು ಮೀಸಲಾತಿ ಕಲ್ಪಿಸಲು ಮುಂದಾಗಿ ನಿಯಮ ರೂಪಿಸಲು ಹೊರಟಿರುವುದು ಮುಸ್ಲಿಂ ಓಲೈಕೆಯ ಪರಮಾವಧಿಯಾಗಿದೆ ಎಂದು ಕಿಡಿಕಾರಿದ್ದಾರೆ.
ಮುಸ್ಲಿಮರೂ ಸೇರಿದಂತೆ ನಾಡಿನ ಎಲ್ಲ ಅಲ್ಪಸಂಖ್ಯಾತ ಸಮುದಾಯಗಳ ಕುರಿತು ಯಾವುದೇ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಂಡರೆ ನಾವು ಅದನ್ನು ಆಕ್ಷೇಪಿಸುವುದಿಲ್ಲ. ಆದರೆ ಕೇವಲ ಮುಸ್ಲಿಮರನ್ನು ಮಾತ್ರ ಪ್ರತ್ಯೇಕಿಸಿ ಓಲೈಸುವುದನ್ನು ಬಲವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ.