S.N. Channabasappa ಶಿವಮೊಗ್ಗದಲ್ಲಿ ಬಿಜೆಪಿ ವತಿಯಿಂದ ನಗರದ ಶುಭಶ್ರೀ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ‘ಕುಟುಂಬ ಮಿಲನ’ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ಮಾತನಾಡಿದರು.
ನಮ್ಮ ಹೆಮ್ಮೆಯ ಸಂಸ್ಕೃತಿ, ಪರಸ್ಪರ ಸೌಹಾರ್ದ್ಯ ಮತ್ತು ಕುಟುಂಬ ಸಂಸ್ಕೃತಿ ಮಹತ್ವ ಕುರಿತು ಅನೇಕ ವಿಷಯಗಳನ್ನು ಮಾತನಾಡಲಾಯಿತು. ‘ವಸುದೈವ ಕುಟುಂಬಕಂ’ ತತ್ವದ ಆಶಯದೊಂದಿಗೆ ಒಗ್ಗೂಡಿದ ಕುಟುಂಬವು ಸದೃಢ ಸಮಾಜ ನಿರ್ಮಾಣಕ್ಕೆ ಬುನಾದಿಯಾಗುತ್ತದೆ ಎಂಬ ದೃಷ್ಟಿಕೋಣವನ್ನು ಹಂಚಿಕೊಂಡರು.
ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೇಷ್ಠ ಪ್ರಚಾರಕರಾದ ಸೂ. ರಾಮಣ್ಣ ಅವರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಸಿದ್ದರಾಮಣ್ಣ, ಬಿಜೆಪಿ ಜಿಲ್ಲಾಧ್ಯಕ್ಷರಾದ ಜಗದೀಶ್, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ಪ್ರಮುಖರಾದ ನಾಗರಾಜ್, ಜ್ಞಾನೇಶ್ವರ್, ದೀನ್ ದಯಾಳ್, ನವಲೆ ಮಂಜು ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.
S.N. Channabasappa ಇಡೀ ದಿನ ನಡೆದ ಈ ಕಾರ್ಯಕ್ರಮದಲ್ಲಿ ಬಿಜೆಪಿ ನಗರದ ವತಿಯಿಂದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಕುಟುಂಬಸ್ಥರಿಗೆ ಆಯೋಜಿಸಲಾಗಿದ್ದ ಅನೇಕ ಸ್ಪರ್ಧೆಗಳಲ್ಲಿ ವಿಜೇತರಿಗೆ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬಿಜೆಪಿಯ ನಿಕಟ ಪೂರ್ವ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಬಹುಮಾನವನ್ನು ವಿತರಿಸಿದರು.
‘ವಸುದೈವ ಕುಟುಂಬಕಂ’ ತತ್ವದ ಆಧಾರದ ಮೇಲೆ ನಡೆದ ಈ ‘ಕುಟುಂಬ ಮಿಲನ’ ಕಾರ್ಯಕ್ರಮವು ಕುಟುಂಬ ಸಂಸ್ಕೃತಿಯ ಮಹತ್ವವನ್ನು ಪ್ರತಿಪಾದಿಸುವ ಒಂದು ವಿಶೇಷ ವೇದಿಕೆಯಾಗಿತ್ತು. ಈ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಅವರ ಕುಟುಂಬಸ್ಥರು ಸಕ್ರಿಯವಾಗಿ ಪಾಲ್ಗೊಂಡಿದ್ದು, ಈ ಕಾರ್ಯಕ್ರಮವನ್ನು ಇನ್ನಷ್ಟು ಸ್ಮರಣೀಯಗೊಳಿಸಿತು