Kote Police Shivamogga ಹೊಳೆಹೊನ್ನೂರು ರಸ್ತೆಯ ಭೈರವ ವೈನ್ ಶಾಪ್ ಹತ್ತಿರ ಅಸ್ವಸ್ಥನಾಗಿ ಮಲಗಿದ್ದ ಸುಮಾರು 60 ರಿಂದ 65 ವಯಸ್ಸಿನ ವ್ಯಕ್ತಿಯನ್ನು ಫೆ.20 ರಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ವ್ಯಕ್ತಿಯು ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯು ಸುಮಾರು 5 ಅಡಿ 5 ಇಂಚು ಎತ್ತರ, ಕಪ್ಪು ಮೈ ಬಣ್ಣ, ಸಾಧಾರಣ ಮೈಕಟ್ಟು, ದುಂಡು ಮುಖ, ತಲೆಯಲ್ಲಿ ಸುಮಾರು 2 ಇಂಚು ಉದ್ದದ ಕಪ್ಪು-ಬಿಳಿ ಬಣ್ಣದ ಕೂದಲು, 3 ಇಂಚು ಉದ್ದದ ಕಪ್ಪು-ಬಿಳಿ ಬಣ್ಣದ ಕುರುಚಲು ಗಡ್ಡ ಇದ್ದು, ಹಣೆಯ ಮಧ್ಯ ಭಾಗದಲ್ಲಿ ಸಾಸಿವೆ ಕಾಳು ಗಾತ್ರದ ಕಪ್ಪು ಮಚ್ಚೆ ಹಾಗೂ ಮೈ ಮೇಲೆ ಬಿಳಿ ಮಾಸಲು ಬಣ್ಣದ ತುಂಬು ತೋಳಿನ ಶರ್ಟ್ ಧರಿಸಿದ್ದಾರೆ.
ಸದರಿ ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಕೋಟೆ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರು ತಿಳಿಸಿದ್ದಾರೆ