Actor Puneeth Rajkumar ನಟ ಪುನೀತ್ ರಾಜ್ ಕುಮಾರ್ ಜನ್ಮದಿನದ ಸ್ಮರಣಾರ್ಥ ನಗರದ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಯುವ ರೆಡ್ ಕ್ರಾಸ್ ಘಟಕದಿಂದ ಮಾ. 17ರಂದು ಬೆಳಗ್ಗೆ 10 ರಿಂದ 3ರ ವರೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯೂಎಸಿ, ಮೆಗ್ಗಾನ್ ಬೋಧನಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ, ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ “ರಕ್ತದಾನ ಮಾಡಿ ಪುನೀತರಾಗಿ” ಘೋಷವಾಕ್ಯದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಮಾ.17ರ ಬೆಳಗ್ಗೆ 10ಕ್ಕೆ ರಕ್ತದಾನ ಶಿಬಿರವನ್ನು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಉದ್ಘಾಟಿಸುವರು.
ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸುವರು.
Actor Puneeth Rajkumar ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಗೌರವ ಕಾರ್ಯದರ್ಶಿ ಡಾ. ದಿನೇಶ್, ದೇಶೀಯ ವಿದ್ಯಾಶಾಲಾ ಸಮಿತಿಯ ಉಪಾಧ್ಯಕ್ಷ ಎಸ್.ಪಿ.ದಿನೇಶ್, ಕಾರ್ಯದರ್ಶಿ ಎಸ್.ರಾಜಶೇಖರ್, ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ ಶೆಟ್ಟಿ, ಖಜಾಂಚಿ ಬಿ.ಗೋಪಿನಾಥ್, ಮೆಗ್ಗಾನ್ ಬೋಧನಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ ವೈದ್ಯಾಧಿಕಾರಿ ಡಾ. ಗೀತಾಲಕ್ಷ್ಮೀ.ಯು, ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿ ಕೇಂದ್ರದ ಕಾರ್ಯದರ್ಶಿ ಮಂಜುನಾಥ ಅಪ್ಪಾಜಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ಯುವ ರೆಡ್ ಕ್ರಾಸ್ ಘಟಕ ಸಂಯೋಜಕ ಡಾ. ಶ್ರೀನಿವಾಸ್ ಲಮಾಣಿ ಉಪಸ್ಥಿತರಿರುವರು.