International Film Festival ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿ ವಿಜೇತ ನಟಿ ಶಬಾನಾ ಆಜ್ಮಿ ಅವರಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಪ್ರಶಸ್ತಿಪತ್ರ ಮತ್ತು 10 ಲಕ್ಷದ ಚೆಕ್ ನೀಡಿ, ಗೌರವಿಸಿದರು.
ವಿಶ್ವ ವಿಖ್ಯಾತ ಕವಿ, ಗೀತರಚನೆಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.
International Film Festival ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾದು ಕೋಕಿಲ, ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದರು.