International Women’s Day ಮಹಿಳೆಯರು ಪ್ರತಿಯೊಂದು ಕ್ಷೇತ್ರಗಳಲ್ಲಿ ಯಶಸ್ಸಿನ ಹಾದಿಯಲ್ಲಿ ಮುನ್ನಡೆಯುತ್ತಿದ್ದಾರೆ ಎಂದು ಕಾವೇರಿ ನದಿ ರಕ್ಷಣಾ ಸಮಿತಿ ಕಾರ್ಯಾಧ್ಯಕ್ಷೆ ಕೆ.ವಿ.ಯಶೋಧ ರಾಜಣ್ಣ ಅಭಿಪ್ರಾಯಪಟ್ಟರು.
ಭದ್ರಾವತಿಯಲ್ಲಿ ಚುಂಚಾದ್ರಿ ಮಹಿಳಾ ವೇದಿಕೆಯಿಂದ ರೋಟರಿ ಕ್ಲಬ್ ಆವರಣದಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಉದ್ಯಮ, ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಉನ್ನತ ಸಾಧನೆ ಮಾಡಬೇಕು ಎಂದು ತಿಳಿಸಿದರು.
ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್ ಮಾತನಾಡಿ, ಅನೇಕ ಸಮಾಜಮುಖಿ ಕೆಲಸಗಳಲ್ಲಿ ಮಹಿಳೆಯರು ಸಾಧನೆ ಮಾಡಿ ಸಮಾಜಕ್ಕೆ ಗೌರವ ತಂದಿದ್ದಾರೆ. ಅವರೆಲ್ಲರೂ ನಮಗೆ ಆದರ್ಶ. ಸ್ಥಳೀಯವಾಗಿಯೂ ಸಾಧನೆ ಮಾಡಿದ ಅನೇಕ ಮಹಿಳೆಯರು ನಮ್ಮಲ್ಲಿ ಇದ್ದಾರೆ. ಮುಂದೆ ಸಹ ಇನ್ನೂ ಹೆಚ್ಚಿನ ಸಮಾಜಮುಖಿ ಕೆಲಸಗಳನ್ನು ಮಾಡಿ ಮನೆಗೂ, ಕುಟುಂಬಕ್ಕೂ ಸಮಾಜಕ್ಕೂ ಕೀರ್ತಿ ತರಬೇಕು ಎಂದರು.
International Women’s Day ಚುಂಚಾದ್ರಿ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಧಾಮಣಿ ವೆಂಕಟೇಶ್ ಹಾಗೂ ಎಲ್ಲಾ ಪದಾಧಿಕಾರಿಗಳು ಕಾರ್ಯಕ್ರಮವನ್ನು ಅದ್ದೂರಿಯಾಗಿ ಯಶಸ್ವಿಯಾಗಿ ನೆರವೇರಿಸಿದರು. ಸುಧಾ ವೆಂಕಟೇಶ ಅವರು ಎಲ್ಲಾ ಮಹಿಳೆಯರಿಗೂ ಮಹಿಳಾ ದಿನಾಚರಣೆ ಶುಭಾಶಯ ಕೋರಿದರು.
ಮಂಡ್ಯ ಕನ್ನಡ ಸಾಹಿತ್ಯ ಪರಿಷತ್‌ನ ಸುಜಾತ ಕೃಷ್ಣ, ಅಂಭ್ರಣಿ ಸಾಂಸ್ಕೃತಿಕ ವೇದಿಕೆ ಶಿವಮೊಗ್ಗ ಅಧ್ಯಕ್ಷೆ ಗಾಯತ್ರಿ ಯಲ್ಲಪ್ಪ ಗೌಡ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ಮಹಿಳಾ ಘಟಕ ಹಾಸನ ಕಾರ್ಯಾಧ್ಯಕ್ಷೆ ಸುಧಾಮಣಿ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ಹಾಸನ ಜಿಲ್ಲಾಧ್ಯಕ್ಷೆ ತಾರಾಮಣಿ, ನಳಿನಿ ಪ್ರವೀಣ್, ರೋಟರಿ ಕ್ಲಬ್ ಭದ್ರಾವತಿ ಅಧ್ಯಕ್ಷೆ ಜಿ ರಾಘವೇಂದ್ರ ಉಪಾಧ್ಯಾಯ ಹಾಜರಿದ್ದರು.
International Women’s Day ಮಹಿಳೆ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕು-ಕೆ.ವಿ.ಯಶೋದಾ ರಾಜಣ್ಣ
Date: