Child Rights and Protection ಬಾಲ್ಯವಿವಾಹ ನಿಷೇಧ ಕಾಯ್ದೆ ಪೋಕ್ಸೋ ಕಾಯ್ದೆ-2012ರ ಅಡಿಯಲ್ಲಿ ದಾಖಲಾಗುವ ಮಕ್ಕಳ ಸುರಕ್ಷತೆ ಮತ್ತು ಕಾನೂನಿನಡಿಯಲ್ಲಿರುವ ಸೌಲಭ್ಯದ ಕುರಿತು ಮಾಹಿತಿ ನೀಡಿದರು. ಪೋಕ್ಸೋ ಪ್ರಕರಣಗಳಲ್ಲಿ ಎಂಎಲ್‌ಸಿಯನ್ನು ತುರ್ತಾಗಿ ಮಾಡಿಸುವ ಅಗತ್ಯ ಇದೆ. ಠಾಣಾ ಅಧಿಕಾರಿಗಳು ಈ ಮಾಹಿತಿಯನ್ವಯ ದೂರು ದಾಖಲಿಸಲು ನಿಗದಿತ ಅವದಿಯಲ್ಲಿ ಕ್ರಮ ವಹಿಸದಿದ್ದಲ್ಲಿ ಅವರು ಕೂಡಾ ಕಾನೂನಿನಡಿಯಲ್ಲಿ ಶಿಕ್ಷೆಗೆ ಅರ್ಹರಾಗುತ್ತಾರೆ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್. ತಿಳಿಸಿದರು.
Child Rights and Protection ಅವರು ಇತ್ತೀಚೆಗೆ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತುರಕ್ಷಣೆ) ಕಾಯ್ದೆ 2015, ತಿದ್ದುಪಡಿಕಾಯ್ದೆ 2021 ಹಾಗೂ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತುರಕ್ಷಣೆ) ಮಾದರಿ ನಿಯಮಗಳು, 2016, ತಿದ್ದುಪಡಿ ಮಾದರಿ ನಿಯಮಗಳು, 2022, Adoption Regulations-2022, ಮಕ್ಕಳ ಸಹಾಯವಾಣಿ-1098/112, ಮಕ್ಕಳ ಪಾಲನಾ ಸಂಸ್ಥೆಗಳ ದಾಖಲಾತಿ ನಿರ್ವಹಣೆ ಮತ್ತು ಮೂಲಭೂತ ಸೌಕರ್ಯಗಳು,ಶೈಕ್ಷಣಿಕ ಸೌಲಭ್ಯಗಳು, ಮಕ್ಕಳ ರಕ್ಷಣಾ ನೀತಿ-2016, ಪರಿಷ್ಕರಣೆ-2023, ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಮಕ್ಕಳ ಹಕ್ಕುಗಳು ಮತ್ತು ಸುರಕ್ಷತೆ, ಪೋಕ್ಸೋ ಕಾಯ್ದೆ-2012, ಮಕ್ಕಳ ಸಹಾಯವಾಣಿ-1098 ಸಾಮಾಜಿಕ ಜಾಲತಾಣ/ಅಪರಾಧಗಳ ಕುರಿತು ಜಿಲ್ಲಾ ಮಟ್ಟದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ನೋಂದಣಾಧಿಕಾರಿಗಳು, ಜನನ ಮತ್ತು ನೋಂದಣಿ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳು, ಜಿಲ್ಲಾ ಮಟ್ಟದ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು, ಸಖಿ ಕೇಂದ್ರ, ಮಕ್ಕಳ ಸಹಾಯವಾಣಿ, ಸರ್ಕಾರಿ, ಅನುದಾನಿತ ಮತ್ತು ಸರ್ಕಾರೇತರ ಮಕ್ಕಳ ಪಾಲನಾ ಸಂಸ್ಥೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಾಜರಿದ್ದ ತಾಜುದ್ದೀನ್‌ಖಾನ್, ಅಧ್ಯಕ್ಷರು, ಮಕ್ಕಳ ಕಲ್ಯಾಣ ಸಮಿತಿ, ಶಿವಮೊಗ್ಗ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಸ್ತುತ ದಿನಮಾನಗಳಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿದ್ದು ಮಕ್ಕಳ ಪಾಲನಾ ಸಂಸ್ಥೆಗಳಿAದ ಕುಟುಂಬಕ್ಕೆ ಹೋದವರು ಪುನ: ಸಂಸ್ಥೆಗೆ ಮರಳಿದಂತಹ ಮಕ್ಕಳ ಸುರಕ್ಷತೆಯ ಹಿತದೃಷ್ಠಿಯಿಂದ ವೈಧ್ಯಕೀಯ ತಪಾಸಣೆ ನಡೆಸುವುದು ಅತಿ ಮುಖ್ಯವಾಗಿರುತ್ತದೆ. ಹದಿಹರೆಯದ ಗರ್ಭಧಾರಣೆ ಮಾಹಿತಿಯು ವೈದ್ಯರಿಗೆ ತಿಳಿದ ಸಂದರ್ಭದಲ್ಲಿ ತಕ್ಷಣ ದೂರು ನೀಡುವುದು ಹಾಗೂ ಅನಾಥ, ಪರಿತ್ಯಕ್ತ ಮಕ್ಕಳನ್ನು ಕಾನೂನಿನಡಿ ದತ್ತು ಪ್ರಕ್ರಿಯೆಗೆ ಒಳಪಡಿಸಿದ್ದಲ್ಲಿ ಅಂತಹ ಮಕ್ಕಳಿಗೆ ನೀಡುವ ಉತ್ತಮ ಭವಿಷ್ಯದ ಕುರಿತು ಸಿಗುವ ಆತ್ಮತೃಪ್ತಿಯು ನಮ್ಮೆಲ್ಲರಿಗೆ ಹೆಮ್ಮೆ ತರುವಂತಹ ವಿಷಯವಾಗಿದೆ ಎಂದರು.
ಮAಜುನಾಥ ಆರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾಘಟಕ, ಶಿವಮೊಗ್ಗ ಇವರು ಅಧ್ಯಕ್ಷೀಯ ನುಡಿಗಳನ್ನು ಆಡುತ್ತಾ ಜಿಲ್ಲಾ ಮಟ್ಟದಲ್ಲಿ ಎಲ್ಲಾ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದು, 2022-23ನೇ ಸಾಲಿನಲ್ಲಿ ಒಟ್ಟು 116 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 64 ಪ್ರಕರಣಗಳನ್ನು ತಡೆಹಿಡಿಯಲಾಗಿರುತ್ತದೆ. 52 ಪ್ರಕರಣಗಳಿಗೆ ಎಫ್.ಐ.ಆರ್ ದಾಖಲಾಗಿರುತ್ತದೆ. 2023-24ನೇ ಸಾಲಿನಲ್ಲಿ ಒಟ್ಟು 140 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 63 ಪ್ರಕರಣಗಳನ್ನು ತಡೆಹಿಡಿಯಲಾಗಿರುತ್ತದೆ. 77 ಪ್ರಕರಣಗಳಿಗೆ ಎಫ್.ಐ.ಆರ್ ದಾಖಲಾಗಿರುತ್ತದೆ. 2024-25ನೇ ಸಾಲಿನ ಇಲ್ಲಿಯವರೆಗೆ ಒಟ್ಟು 100 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 30 ಪ್ರಕರಣಗಳನ್ನು ತಡೆಹಿಡಿಯಲಾಗಿರುತ್ತದೆ. 69 ಪ್ರಕರಣಗಳಿಗೆ ಎಫ್.ಐ.ಆರ್ ದಾಖಲಾಗಿರುತ್ತದೆ. ಜಿಲ್ಲೆಯಲ್ಲಿರುವ ಎಲ್ಲಾ ಇಲಾಖೆಗಳ ಬಾಲ್ಯವಿವಾಹ ನಿಷೇದಾಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ನಿರ್ವಸಿದ್ದಲ್ಲಿ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ತರಬೇತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮಂಜುನಾಥ ಪಾಟೀಲ್, ಈಸ್ಟ್ ಟ್ರಾಫಿಕ್ ಪೊಲೀಸ್ ಠಾಣೆ, ಶಿವಮೊಗ್ಗ ಇವರು ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಮಕ್ಕಳ ಹಕ್ಕುಗಳು ಮತ್ತು ಸುರಕ್ಷತೆ, ಪೋಕ್ಸೋ ಕಾಯ್ದೆ-2012, ಮಕ್ಕಳ ಸಹಾಯವಾಣಿ-1098 ಸಾಮಾಜಿಕ ಜಾಲತಾಣ/ಅಪರಾಧಗಳ, ಮಕ್ಕಳ ಅನೈತಿಕ ಸಾಗಾಣಿಕೆ ವಿಷಯಗಳ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಘಟಕದ ಅಧಿಕಾರಿಗಳು ಬಾಲನ್ಯಾಯ (ಮಕ್ಕಳ ಪಾಲನೆ ಮತ್ತುರಕ್ಷಣೆ) ಕಾಯ್ದೆ 2015, ತಿದ್ದುಪಡಿಕಾಯ್ದೆ 2021 ಹಾಗೂ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತುರಕ್ಷಣೆ) ಮಾದರಿ ನಿಯಮಗಳು, 2016, ತಿದ್ದುಪಡಿ ಮಾದರಿ ನಿಯಮಗಳು, 2022, Adoption Regulations-2022, ಮಕ್ಕಳ ಸಹಾಯವಾಣಿ-1098/112, ಮಕ್ಕಳ ಪಾಲನಾ ಸಂಸ್ಥೆಗಳ ದಾಖಲಾತಿ ನಿರ್ವಹಣೆ ಮತ್ತು ಮೂಲಭೂತ ಸೌಕರ್ಯಗಳು, ಶೈಕ್ಷಣಿಕ ಸೌಲಭ್ಯಗಳು, ಮಕ್ಕಳ ರಕ್ಷಣಾ ನೀತಿ-2016, ಪರಿಷ್ಕರಣೆ-2023 ಕುರಿತು ಮಾಹಿತಿ ನೀಡಿದರು.
ತರಬೇತಿ ಕಾರ್ಯಕ್ರಮದಲ್ಲಿ ಗಾಯಿತ್ರಿ ಡಿ.ಎಸ್, ರಕ್ಷಣಾಧಿಕಾರಿ(ಸಾಂಸ್ಥಿಕ) ಇವರು ಸ್ವಾಗತಿಸಿದರು. ಗಣೇಶ್ ಹೆಚ್. ರಕ್ಷಣಾಧಿಕಾರಿ(ಅಸಾಂಸ್ಥಿಕ) ಇವರು ನಿರೂಪಿಸಿದರು. ಭರತ್ ಎಸ್. ಎಂ. ಸಮಾಜ ಕಾರ್ಯಕರ್ತರು ವಂದಿಸಿದರು
Child Rights and Protection ಫೋಕ್ಸೋ ಪ್ರಕರಣಗಳ ತುರ್ತುದೂರು ದಾಖಲಿಸದಿದ್ದಲ್ಲಿ ಠಾಣಾಧೀಕಾರಿಗಳೂ ಶಿಕ್ಷೆಗೆ ಅರ್ಹರು- ನ್ಯಾ.ಎಂ.ಎಸ್.ಸಂತೋಷ್
Date: