Friday, December 5, 2025
Friday, December 5, 2025

CM Siddharamaiah ಕಿತ್ತೂರು ಚೆನ್ನಮ್ಮ ಸಮಾಧಿಯನ್ನ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ‌ಸಿಎಂ ಮನವಿ ಪತ್ರ

Date:

CM Siddharamaiah ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಾವು ಬರೆದಿರುವ ಪತ್ರದ ಕನ್ನಡ ಭಾಷಾಂತರವನ್ನ ‌ಜಾಲತಾಣದಲ್ಲಿ‌ ಹಂಚಿಕೊಂಡಿದ್ದಾರೆ.

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೇ,

ವಿಷಯ: ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಮನವಿ

ಕರ್ನಾಟಕದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆ ಸಾರುವ ವೀರ ರಾಣಿ ಕಿತ್ತೂರು ಚೆನ್ನಮ್ಮನ ಸಮಾಧಿ ತಾಣ ಇರುವುದನ್ನು ಸಮಸ್ತ ಕನ್ನಡಿಗರ ಪರವಾಗಿ ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಸಶಸ್ತ್ರ ಹೋರಾಟವನ್ನು ಮುನ್ನಡೆಸಿದ ಮಹಿಳೆಯರಲ್ಲಿ ರಾಣಿ ಚೆನ್ನಮ್ಮ ಮೊದಲಿಗರು. ಅವರ ಶೌರ್ಯ ಮತ್ತು ಅದಮ್ಯ ಚೈತನ್ಯ ಯುವಜನತೆಗೆ ಸ್ಫೂರ್ತಿದಾಯಕವಾಗಿದೆ.

ಈ ಅಪ್ರತಿಮ ನಾಯಕಿಯ ಸಮಾಧಿಯು ಕೇವಲ ವಿಶ್ರಾಂತಿ ಸ್ಥಳವಲ್ಲ, ಬದಲಾಗಿ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಪ್ರತಿನಿಧಿಸುವ ಮಹಾನ್ ಶಕ್ತಿ ಸ್ಥಳವಾಗಿದೆ. 1824ರಲ್ಲಿ ಬ್ರಿಟಿಷ್‌ ಈಸ್ಟ್‌ ಇಂಡಿಯಾ ಕಂಪನಿ ವಿರುದ್ಧ ರಾಣಿ ಚೆನ್ನಮ್ಮ ಕೆಚ್ಚೆದೆಯಿಂದ ಹೋರಾಡಿದ ಕಾರಣ ಇಂದಿಗೂ ಈ ಸಮಾಧಿ ತಾಣವು ಧೈರ್ಯ ಮತ್ತು ತ್ಯಾಗದ ಸಂಕೇತವಾಗಿ ನಿಂತಿದೆ.

ಹೀಗಾಗಿ, ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಮನವಿ ಮಾಡುತ್ತೇನೆ. ಈ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿನ ಅವರ ಹೋರಾಟವನ್ನು ಸ್ಮರಿಸಿ, ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಗೌರವಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

CM Siddharamaiah ರಾಣಿ ಚೆನ್ನಮ್ಮನ ಸಮಾಧಿ ತಾಣವು ಅಪಾರ ಐತಿಹಾಸಿಕ ಮಹತ್ವವನ್ನು ಹೊಂದಿದೆ. ಆದಾಗ್ಯೂ, ಅದಕ್ಕೆ ಸರಿಯಾದ ಸಂರಕ್ಷಣೆ ಮತ್ತು ಅಭಿವೃದ್ಧಿಯ ಅಗತ್ಯವಿದೆ. ಈ ಸಮಾಧಿ ತಾಣವು ರಾಷ್ಟ್ರೀಯ ಸ್ಮಾರಕ ಆಗುವುದರಿಂದ ದೇಶದ ಪ್ರೇಕ್ಷಣಿಯ ಸ್ಥಳವಾಗಿಯೂ ಗುರುತಿಸಿಕೊಳ್ಳುತ್ತದೆ. ಸಾಂಸ್ಕೃತಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವುದರೊಂದಿಗೆ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆಯನ್ನು ನೀಡುತ್ತದೆ. ಇದಕ್ಕೂ ಮುಖ್ಯವಾಗಿ ರಾಣಿ ಚೆನ್ನಮ್ಮಳ ಧೈರ್ಯ, ಶೌರ್ಯ, ತ್ಯಾಗವನ್ನು ಮುಂದಿನ ಪೀಳಿಗೆಗೂ ತಿಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಸ್ವಾತಂತ್ರ್ಯ ಹೋರಾಟದ ಮೂಲಕ ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಗೌರವಿಸುವಲ್ಲಿ ಇದು ಒಂದು ಸ್ಮರಣೀಯ ಹೆಜ್ಜೆಯಾಗಿದೆ. ಅಲ್ಲದೇ ಪ್ರಾಚೀನ ಸ್ಮಾರಕಗಳು ಮತ್ತು ಐತಿಹಾಸಿಕ ತಾಣಗಳನ್ನು ಸಂರಕ್ಷಿಸುವಲ್ಲಿ ಭಾರತ ಸರ್ಕಾರದ ಬದ್ಧತೆಯನ್ನು ಇದು ಖಾತ್ರಿಪಡಿಸುತ್ತದೆ.

ಹೀಗಾಗಿ ಈ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವೆಂದು ಮೌಲ್ಯಮಾಪನ ಮಾಡುವ ಮತ್ತು ಘೋಷಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ತಾವು ಸಂಸ್ಕೃತಿ ಸಚಿವಾಲಯ ಮತ್ತು ಭಾರತೀಯ ಪುರಾತತ್ವ ಇಲಾಖೆಗೆ ನಿರ್ದೇಶನ ನೀಡಬೇಕೆಂದು ವಿನಂತಿಸುತ್ತೇನೆ.
ಈ ಮೂಲಕ ಶ್ರೀಮಂತ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆ ಹೊಂದಿರುವ ಕರ್ನಾಟಕವು ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಉತ್ಸುಕವಾಗಿದೆ ಎಂದು ಮುಖ್ಯಮಂತ್ರಿ
ಸಿದ್ಧರಾಮಯ್ಯ ಪತ್ರ ಮುಖೇನ‌ ಆಗ್ರಹಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...