Saturday, December 6, 2025
Saturday, December 6, 2025

Gurudatta Hegde ಬೀದಿಬದಿ ವ್ಯಾಪಾರಿಗಳಿಗೆ ಸಹಕರಿಸಿ ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಿ- ಗುರುದತ್ತ ಹೆಗಡೆ.

Date:

Gurudatta Hegde ಶಿವಮೊಗ್ಗ ನಗರದ ಗಾಂಧಿಬಜಾರ್‌ಸೇರಿದಂತೆ ಹಲವು ಜನನಿಬಿಡ ಪ್ರದೇಶಗಳಲ್ಲಿ ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಬೀದಿಬದಿ ವ್ಯಾಪಾರಿಗಳು ಸಣ್ಣ ಸಣ್ಣ ಅಂಗಡಿಗಳನ್ನು ತೆರೆದುಕೊಂಡು ವ್ಯವಹಾರ ನಡೆಸುತ್ತಿರುವ ಕಾರಣ ಜನಸಾಮಾನ್ಯರ ಸುಗಮ ಸಂಚಾರ ಮತ್ತು ಪಾದಚಾರಿಗಳ ಓಡಾಟಕ್ಕೆ ತೀವ್ರ ತರಹದ ಅಡಚಣೆಯಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಬರುತ್ತಿರುವ ದೂರುಗಳನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಅದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಕಲ್ಪಿಸಬೇಕಾದ ಮೂಲಭೂತ ಸೌಕರ್ಯಗಳು ಹಾಗೂ ಸಮಸ್ಯೆಯ ಪರಿಹಾರಕ್ಕೆ ಕೈಗೊಳ್ಳಬಹುದಾದ ತುರ್ತು ಕ್ರಮಗಳ ಬಗ್ಗೆ ಏರ್ಪಡಿಸಲಾಗಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಗಾಂಧೀಬಜಾರಿನ ರಸ್ತೆಯ ಇಕ್ಕೆಲಗಳಲ್ಲಿ ವ್ಯವಹರಿಸುತ್ತಿರುವ ವ್ಯಾಪಾರಿಗಳು ಮುಂದಿನ 15ದಿನಗಳಲ್ಲಿ ಈಗಾಗಲೇ ಸೂಚಿಸಲಾದ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಬೀದಿಬದಿ ವ್ಯಾಪಾರ ನಡೆಸುತ್ತಿರುವವರನ್ನು ಗುರುತಿಸಿ, ಅವರಿಗೆ ತಮ್ಮ ವ್ಯವಹಾರದ ಸ್ಥಳಕ್ಕೆ ಅನುಕೂಲವಾಗುವಂತೆ ಲಭ್ಯವಾಗಬಹುದಾದ ಕನ್ಸರ್‌ವೆನ್ಸಿಗಳನ್ನು ಅಭಿವೃದ್ಧಿಪಡಿಸಿ, ನೀರು, ಶೌಚಾಲಯ ಮತ್ತು ವಿದ್ಯುತ್‌ಸಂಪರ್ಕ ಸೌಲಭ್ಯಗಳನ್ನು ಮುಂದಿನ 15ದಿನಗಳೊಳಗಾಗಿ ಒದಗಿಸುವಂತೆ ಜಿಲ್ಲಾಧಿಕಾರಿಗಳು ಮಹಾನಗರಪಾಲಿಕೆಯ ಆಯುಕ್ತರಿಗೆ ಸೂಚಿಸಿದರು.
ಹೈಟೆನ್ಶನ್‌ವಿದ್ಯುತ್‌ತಂತಿ ಹಾದು ಹೋಗಿರುವ ಪ್ರದೇಶಗಳಲ್ಲಿ ಹಾಗೂ ಪ್ಲೈಓವರ್‌ಗಳ ಕೆಳಭಾಗಗಳಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸೌಲಭ್ಯ ಕಲ್ಪಿಸಿಕೊಡಬಹುದಾದ ಸಾಧ್ಯತೆಗಳ ಬಗ್ಗೆಯೂ ಪರಿಶೀಲಿಸುವಂತೆ ಸೂಚಿಸಿದ ಅವರು, ಬೀದಿಬದಿ ವ್ಯಾಪಾರಿಗಳಿಂದಲೂ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಇತ್ಯರ್ಥಪಡಿಸಲು ಕ್ರಮವಹಿಸುವಂತೆಯೂ ಸಲಹೆ ನೀಡಿ ಅವರು, ವ್ಯಾಪಾರಕ್ಕೆ ಸೂಕ್ತವಾದ ಪ್ರದೇಶಗಳನ್ನು ಗುರುತಿಸಿ ಸೌಲಭ್ಯಗಳನ್ನು ಕಲ್ಪಿಸಿಕೊಡುವುದರ ಜೊತೆಗೆ ನಿರ್ಬಂಧಿತ ಪ್ರದೇಶಗಳಲ್ಲಿ ವ್ಯಾಪಾರ ರಹಿತ ವಲಯಗಳೆಂದು ಫಲಕಗಳನ್ನು ಅಳವಡಿಸುವಂತೆಯೂ ಅವರು ಸೂಚಿಸಿದರು.
ಬಹುಮುಖ್ಯವಾಗಿ ನಗರದ ಮಿಳ್ಳಘಟ್ಟ ರಸ್ತೆಯಲ್ಲಿ ಪ್ರತಿ ಮಂಗಳವಾರ ನಗರ ಮತ್ತು ಗ್ರಾಮಾಂತರ ಪ್ರದೇಶಗಳಿಂದ ಬಂದು ಸಂತೆ ಸೇರುವ ಜನರು, ರಾಜ್ಯ ರಸ್ತೆ ಸಾರಿಗೆ ನಿಗಮದ ಡಿಪೋ ಪಕ್ಕದಲ್ಲಿ ಪರ್ಯಾಯವಾಗಿ ಗುರುತಿಸಲಾಗಿರುವ ಸ್ಥಳದಲ್ಲಿ ಸಂತೆ ಸೇರಿ ವಹಿವಾಟು ನಡೆಸುವಂತೆ, ಹಾಗೂ ವಿನೋಬನಗರದ ಶಿವಾಲಯದ ಬಳಿ ಮೂರು ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಬೀದಿಬದಿ ವ್ಯಾಪಾರಿಗಳಿಗಾಗಿಯೇ ಮಳಿಗೆಗಳನ್ನು ನಿರ್ಮಿಸಲಾಗಿದ್ದು, ಮಳಿಗೆಗಳನ್ನು ಪಡೆದವರು ಅವುಗಳನ್ನು ಬಳಸದೇ ಹಾಗೇ ಉಳಿದಿವೆ. ಅಲ್ಲದೇ ಪುನಃ ಬೀದಿ ಬದಿ ವ್ಯಾಪಾರಕ್ಕೆ ಮುಂದಾಗಿರುವುದು ಸರಿಯಲ್ಲ. ಮಳಿಗೆಗಳನ್ನು ಪಡೆದವರು ಕೂಡಲೇ ಮಳಿಗೆಗಳಲ್ಲಿ ವಹಿವಾಟು ನಡೆಸಲು ಮುಂದಾಗಬೇಕು. ತಪ್ಪಿದಲ್ಲಿ ಅವುಗಳನ್ನು ಅಗತ್ಯವಿರುವವರಿಗೆ ವಿಲೇ ಮಾಡಲು ಕ್ರಮ ಕೈಗೊಳ್ಳಲಾಗುವುದು. ಪಾಲಿಕೆಯ ಅಧಿಕಾರಿಗಳು ಸದರಿ ಸ್ಥಳವನ್ನು ಕೂಡಲೇ ಸ್ವಚ್ಚಗೊಳಿಸಿ ವ್ಯಾಪಾರ ವಹಿವಾಟು ನಡೆಸಲು ಅನುಕೂಲ ಮಾಡಿಕೊಡುವಂತೆ ಅವರು ಸೂಚಿಸಿದರು.
Gurudatta Hegde ಹಣ್ಣು-ಹೂವಿನ ವ್ಯಾಪಾರಿಗಳನ್ನು ಸಮೀಪದ ಕನ್ಸರ್‌ವೆನ್ಸಿ ರಸ್ತೆಗಳಿಗೆ ಸ್ಥಳಾಂತರಗೊಳಿಸುವಂತೆ, ನಗರದ ಗೌರವ ಲಾಡ್ಜ್‌ಸಮೀಪದ ನೂತನವಾಗಿ ನಿರ್ಮಿಸಲಾಗಿರುವ ಸಂಕೀರ್ಣಕ್ಕೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದ ಅವರು, ನಗರದ ಸುಮಾರು 14ಸ್ಥಳಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಅಭಿವೃಧ್ಧಿಪಡಿಸಿ, ಬೀದಿಬದಿ ವ್ಯಾಪಾರಿಗಳ ಅನುಕೂಲಕ್ಕೆ ಒದಗಿಸಲು ಸೂಚಿಸಲಾಗಿದೆ ಎಂದವರು ನುಡಿದರು.
ವಿನಾಯಕ ಚಿತ್ರಮಂದಿರದ ಸಮೀಪದ ಪಾಲಿಕೆಯಸ್ವತ್ತಿನ ವಿಷಯ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ, ನ್ಯಾಯಾಲಯದ ತೀರ್ಪಿನಂತೆ ಕ್ರಮ ವಹಿಸಲಾಗುವುದು.ವಿದ್ಯಾನಗರ, ಎಂ.ಆರ್.ಎಸ್., ಗುರುಪುರ, ಸೆಕ್ರೇಡ್‌ಹಾರ್ಟ್‌ಚರ್ಚ್-ಮೀನಾಕ್ಷಿ ಭವನ, ಹಾಗೂ ಸುತ್ತಮುತ್ತಲ ಪ್ರದೇಶದ ಬೀದಿಬದಿ ವ್ಯಾಪಾರಿಗಳು ಮತ್ತೂರು ರಸ್ತೆಗೆ ಸ್ಥಳಾಂತರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಬೀದಿಬದಿ ವ್ಯಾಪಾರಿಗಳ ಸುರಕ್ಷತೆ ಹಾಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಮತ್ತೊಂದು ಸಭೆ ಆಯೋಜಿಸಿ ಚರ್ಚಿಸಲಾಗುವುದು ಎಂದ ಅವರು, ವ್ಯಾಪಾರಿಗಳು ಉತ್ಪತ್ತಿಯಾದ ಕಸವನ್ನು ಬೇರ್ಪಡಿಸಿ ನೀಡಬೇಕು. ಅಲ್ಲದೇ ಎಲ್ಲೆಂದರಲ್ಲಿ ಬಿಸಾಕಬಾರದು ಮಾತ್ರವಲ್ಲ ಜವಾಬ್ದಾರಿಯುತವಾಗಿ ಜಿಲ್ಲಾಡಳಿತದೊಂದಿಗೆ ವರ್ತಿಸಬೇಕು. ನಗರವನ್ನು ರಾಜ್ಯದ ಮಾದರಿ ನಗರವನ್ನಾಗಿ ನಿರ್ಮಿಸಲು ಅಗತ್ಯ ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಹೆಚ್ಚುವರಿ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಅನಿಲ್‌ಕುಮಾರ್‌ಭೂಮರೆಡ್ಡಿ ಅವರು ಮಾತನಾಡಿ, ನಗರದಲ್ಲಿ ವಾಹನಗಳ ನಿಲುಗಡೆ ಮತ್ತು ಬೀದಿಬದಿ ವ್ಯಾಪಾರಿಗಳಿಂದಾಗಿ ವಾಹನಗಳ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ಅಡಚಣೆ ಉಂಟಾಗುತ್ತಿದೆ. ವಿಶೇಷವಾಗಿ ಉಷಾ ನರ್ಸಿಂಗ್‌ವರ್ತುಲದಲ್ಲಿ ತೀರ್ವ ತರಹದ ಅಡಚಣೆ ಉಂಟಾಗುತ್ತಿರುವುದನ್ನು ಗುರುತಿಸಲಾಗಿದ್ದು, ಶೀಘ್ರದಲ್ಲಿ ಸಮಸ್ಯೆಯ ಇತ್ಯರ್ಥಕ್ಕೆ ಕ್ರಮವಹಿಸಬೇಕಾದ ಅಗತ್ಯವಿದೆ ಎಂದರು.
ಸಭೆಯಲ್ಲಿ ಮಹಾನಗರಪಾಲಿಕೆ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್‌, ಡಿ.ವೈ.ಎಸ್ಪಿ., ಸಂಜೀವ್‌ಕುಮಾರ್‌, ಪಾಲಿಕೆ ಅಧಿಕಾರಿ ಶ್ರೀಮತಿ ಅನುಪಮ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಬೀದಿಬದಿ ವ್ಯಾಪಾರಿ ಮಣಿಕಂಠ, ಚನ್ನವೀರಪ್ಪ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...