Sunday, November 29, 2026
Sunday, November 29, 2026

S.N. Chennabasappa ಶಿವಮೊಗ್ಗ ನೆಹರು ರಸ್ತೆಯಲ್ಲಿನ ಟ್ರಾಫಿಕ್ , ವಾಹನ ಪಾರ್ಕಿಂಗ್ ಸಮಸ್ಯೆ ಬಗ್ಗೆ ವರ್ತಕ ಸಂಘದೊಂದಿಗೆ ಶಾಸಕ ಚೆನ್ನಿ ಚರ್ಚೆ

Date:

S.N. Chennabasappa ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ನಗರದ ಹೃದಯಭಾಗದ ನೆಹರು ರಸ್ತೆಗೆ ಭೇಟಿ ನೀಡಿ, ಅಲ್ಲಿನ ನೆಹರು ರಸ್ತೆ ವರ್ತಕರ ಸಂಘದ ಸದಸ್ಯರೊಂದಿಗೆ ವಿಶೇಷ ಸಭೆ ನಡೆಸಿ, ಸಭೆಯಲ್ಲಿ ವಿವಿಧ ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಚರ್ಚಿಸಲಾದ ಪ್ರಮುಖ ವಿಷಯಗಳು:

  1. ಟ್ರಾಫಿಕ್ ಸಮಸ್ಯೆ: ನೆಹರು ರಸ್ತೆಯಲ್ಲಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿರುವ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ವ್ಯಾಪಾರಿಗಳ ಸಲಹೆ-ಪರಾಮರ್ಶೆ ಪಡೆದುಕೊಳ್ಳಲಾಯಿತು.
  2. ಪಾರ್ಕಿಂಗ್ ವ್ಯವಸ್ಥೆ: ನೆಹರು ರಸ್ತೆಗೆ ಬರುವ ವಾಹನಗಳನ್ನು ಕನ್ಸರ್ವೆನ್ಸಿ ರಸ್ತೆಯಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಬೇಕಾಗಿರುವಂತಹ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳಲು ನಿರ್ಧರಿಸಲಾಯಿತು.
  3. ನೆಹರು ರಸ್ತೆಯಲ್ಲಿ ಯುಜಿಡಿ ಬ್ಲಾಕ್ ಆಗುತ್ತಿರುವ ಸಮಸ್ಯೆಯಿಂದ ಸಾರ್ವಜನಿಕರಿಗೆ ಎದುರಾಗುತ್ತಿರುವ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
  4. ಅದೇ ರೀತಿ, ನೆಹರು ರಸ್ತೆಯಲ್ಲಿರುವ ಮಹಾನಗರ ಪಾಲಿಕೆಯ ಶೌಚಾಲಯ ಶಿಥಿಲಾವಸ್ಥೆಯಲ್ಲಿದ್ದು, ಸಾರ್ವಜನಿಕರಿಗೆ ಉತ್ತಮ ಸೌಲಭ್ಯಗಳ ಒದಗಿಸುವ ನಿಟ್ಟಿನಲ್ಲಿ ನೂತನ ಶೌಚಾಲಯ ನಿರ್ಮಾಣದ ಕುರಿತು ಚರ್ಚೆ ನಡೆಸಿದರು.

S.N. Chennabasappa ಸಭೆಯಲ್ಲಿ ನೆಹರು ರಸ್ತೆಯ ವರ್ತಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು, ಸದಸ್ಯರು, ಡಿವೈಎಸ್ಪಿ ಬಾಬು ಅಂಜನಪ್ಪ, ಟ್ರಾಫಿಕ್ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sahachetana Natyaalaya ಮೊದಲ ಅಂತಾರಾಷ್ಟ್ರೀಯ ನೃತ್ಯಪ್ರದರ್ಶನ: ಕಲಾರಸಿಕರ ಮನಸೂರೆಗೈದ ಸಹಚೇತನ ನಾಟ್ಯಾಲಯ

ದುಬೈನಲ್ಲಿ ನಡೆದ ಗಲ್ಫ್ ರಾಷ್ಟ್ರಗಳ ಅತಿದೊಡ್ಡ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಒಂದಾದ 'ದುಬೈ...

ಆಹಾರ ತಯಾರಿಕೆ: ಸಂಸ್ಕರಣೆ ಮತ್ತು ವಿತರಣೆಯಲ್ಲಿ ಸೂಕ್ತ ಸುರಕ್ಷತಾ ಕ್ರಮ ಅಳವಡಿಕೆ ಕಡ್ಡಾಯ- ಡಾ.ಎಚ್.ಪಿ.ಎಸ್.ಮೈತ್ರಿ

Rotary Club Shivamogga ಸುರಕ್ಷಿತ ಆಹಾರ ಪ್ರತಿಯೊಬ್ಬ ಗ್ರಾಹಕನ ಹಕ್ಕಾಗಿದ್ದು, ಆಹಾರದಿಂದ...

D.K. Shivakumar ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ- ಡಿ.ಕೆ.ಶಿವಕುಮಾರ್.

D.K. Shivakumar ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ...