Tuesday, February 3, 2026
Tuesday, February 3, 2026

Karnataka Minorities Development Corporation ಅರಿವು ಯೋಜನೆ, ಸಾಲ ಸೌಲಭ್ಯ ಪಡೆಯಲು ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಪ್ರಕಟಣೆ

Date:

Karnataka Minorities Development Corporation 2025-26 ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಸಮುದಾಯ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(ಕೆಇಎ) ಆಯ್ಕೆಯಾಗುವ ಫ್ರೆಶ್/ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅರಿವು ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೃತ್ತಿಪರ ಕೋರ್ಸ್ಗಳಾದ ಎಂಬಿಬಿಎಸ್, ಬಿಡಿಎಸ್, ಬ್ಯಾಚುಲರ್ ಆಫ್ ಆಯುಷ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬ್ಯಾಚುಲರ್ ಆಫ್ ಇಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ, ಫಾರ್ಮಸಿ, ಅಗ್ರಿಕಲ್ಚರ್ ಸೈನ್ಸ್, ವೆಟರ್ನರಿ ಹಾಗೂ ಫಾರ್ಮ್ ಸೈನ್ಸ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಈ ಸೌಲಭ್ಯವನ್ನು ಒದಗಿಸಲಾಗುತ್ತದೆ.

Karnataka Minorities Development Corporation ಮೇ.5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, www.kmdconline.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಎಸ್‌ಎಸ್‌ಎಲ್‌ಸಿ ಮಾರ್ಕ್ಸ್ ಕಾರ್ಡ್/ಪಿಯುಸಿ ಮಾರ್ಕ್ಸ್ ಕಾರ್ಡ್, ಆಧಾರ್ ಕಾರ್ಡ್, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ(8 ಲಕ್ಷ ಒಳಗಿದ್ದವರಿಗೆ), ವಿದ್ಯಾರ್ಥಿ/ ಪೋಷಕರ ಫೋಟೋ, ಸಿಇಟಿ/ನೀಟ್ ಹಾಲ್ ಟಿಕೆಟ್, ಇಂಡೆಮ್ನಿಟಿ ಬಾಂಡ್/ನೋಟರಿ, ವಿದ್ಯಾರ್ಥಿ ಮತ್ತು ಪೋಷಕರ ಸೆಲ್ಫ್ ಡಿಕ್ಲರೇಷನ್ ಲೆಟರ್ ಈ ಎಲ್ಲಾ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಅಚ್ಚುತರಾವ್ ಲೇ ಔಟ್, 4ನೇ ತಿರುವು, ನಂಜಪ್ಪ ಆಸ್ಪತ್ರೆ ಮುಂಭಾಗ ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182228262 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...