Saturday, December 6, 2025
Saturday, December 6, 2025

DC Shivamogga ಶಿವಮೊಗ್ಗದಲ್ಲಿ ಮೇ 18 ರಿಂದ 20 ವರೆಗೆ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ & ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ- ಗುರುದತ್ತ ಹೆಗಡೆ

Date:

DC Shivamogga ಶಿವಮೊಗ್ಗ ಜಿಲ್ಲಾಡಳಿತವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಮೇ 18ರಿಂದ 20ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗದಲ್ಲಿ ಏರ್ಪಡಿಸಲು ಉದ್ದೇಶಿಸಲಾಗಿದೆ.

ಕ್ರೀಡಾಕೂಟವು ಯಶಸ್ವಿಯಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ-2025ರ ಕುರಿತು ಏರ್ಪಡಿಸಲಾಗಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 15000ಕ್ಕೂ ಹೆಚ್ಚಿನ ನೌಕರ ಕ್ರೀಡಾಪಟುಗಳು ಆಗಮಿಸುವ ನಿರೀಕ್ಷೆಯಿದ್ದು, ಅವರ ವಸತಿ ಹಾಗೂ ಊಟೋಪಹಾರ ಮತ್ತು ಸಾರಿಗೆ ವ್ಯವಸ್ಥೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ನಗರದ ನೆಹರೂ ಕ್ರೀಡಾಂಗಣ, ಜೆ.ಎನ್.ಎನ್.ಸಿ.ಇ. ಕಾಲೇಜು ಮತ್ತು ಗೋಪಾಳದ ಕ್ರೀಡಾಸಂಕೀರ್ಣಗಳಲ್ಲಿ ವಿವಿಧ ಕ್ರೀಡೆಗಳನ್ನು ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಇದರೊಂದಿಗೆ ನಗರದ ಕುವೆಂಪು ರಂಗಮಂದಿರ ಮತ್ತು ಡಾ|| ಬಿ.ಆರ್.ಅಂಬೇಡ್ಕರ್‌ಭವನಗಳಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲು ಸ್ಥಳಗಳನ್ನು ಗುರುತಿಸಲಾಗಿದೆ.

ಅಲ್ಲದೇ ಅಗತ್ಯವಿದ್ದಲ್ಲಿ ಇನ್ನಷ್ಟು ಸಮನಾಂತರ ವೇದಿಕೆಗಳನ್ನು ಸೃಜಿಸಲು ಉದ್ದೇಶಿಸಲಾಗಿದೆ ಎಂದರು.
ಮೂರು ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಕೂಟವು ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಜೊತೆಗೆ ಆಹ್ವಾನಿತ ಕ್ರೀಡಾಪಟುಗಳು ಸ್ಥಳೀಯ ನಾಗರೀಕರಿಗಾಗಿ ಮನೋರಂಜನಾ ಕಾರ್ಯಕ್ರಮಗಳನ್ನು ನಡೆಸಲು ಉದ್ಧೇಶಿಲಾಗಿದೆ.

ಕಾರ್ಯಕ್ರಮಗಳು ನಡೆಯುವ ಈ ಮೂರು ದಿನಗಳ ಕಾಲ ಯಾವುದೇ ಅಡಚಣೆ ಉಂಟಾಗದಂತೆ ನಿರಂತರವಾಗಿ ವಿದ್ಯುತ್‌ ಒದಗಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಅಲ್ಲದೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸುವ ಉದ್ದೇಶದಿಂದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್‌ ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಕ್ರೀಡಾಕೂಟದ ವ್ಯವಸ್ಥಿತ ನಿರ್ವಹಣೆಗಾಗಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಅದರ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಲಾಗಿದೆ. ಕ್ರೀಡೆಗಳಲ್ಲಿ ಉತ್ತಮ ಹಾಗೂ ನುರಿತ ತೀರ್ಪುಗಾರರನ್ನು ನೇಮಿಸಲು ಉದ್ದೇಶಿಸಲಾಗಿದೆ. ಅಗತ್ಯವಿದ್ದಲ್ಲಿ ನೆರೆಯ ಜಿಲ್ಲೆಗಳ ನುರಿತ ತೀರ್ಪುಗಾರರನ್ನು ಬಳಸಿಕೊಳ್ಳಲು ಯತ್ನಿಸಲಾಗುವುದು ಎಂದ ಅವರು, ಕ್ರೀಡಾಪಟುಗಳಿಗೆ ಅನುಕೂಲವಾಗುವಂತೆ ಹಾಗೂ ಅವರು ತಂಗುವ ಸ್ಥಳಕ್ಕೆ ಹೋಗಿ ಬರಲು ಸಾರಿಗೆ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಅಲ್ಲದೇ ಈ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಕ್ರೀಡಾಪಟುಗಳ ಆರೋಗ್ಯ, ಆಕಸ್ಮಿಕ ಅಗ್ನಿ ಅವಘಡ ಸೇರಿದಂತೆ ತಕ್ಷಣದ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಹಾಗೂ ತುರ್ತು ಮಾಹಿತಿಗಾಗಿ ಸಂಪರ್ಕಿಸಲು ಅಧಿಕಾರಿಗಳೊಬ್ಬರನ್ನು ನೇಮಿಸಲಾಗುವುದು. ಕಾರ್ಯಕ್ರಮವನ್ನು ಇನ್ನಷ್ಟು ಅಚ್ಚುಕಟ್ಟಾಗಿ ರೂಪಿಸುವಲ್ಲಿ ಎನ್.ಎಸ್.ಎಸ್., ಎನ್.ಸಿ.ಸಿ., ಸ್ಕೌಟ್‌ ಮತ್ತು ಗೈಡ್ಸ್‌ಗಳ ಸಹಕಾರವನ್ನು ಪಡೆದುಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ಈಗಾಗಲೇ ರಾಜ್ಯ ಮಟ್ಟದ ಕ್ರೀಡಾ ಇಲಾಖೆಯ ಆಯುಕ್ತರೊಂದಿಗೆ ಮೊದಲ ಸುತ್ತಿನ ಸಮಾಲೋಚನಾ ಸಭೆ ನಡೆಸಲಾಗಿದ್ದು, ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅಂತೆಯೇ ಆತಿಥೇಯ ಜಿಲ್ಲೆ ಶಿವಮೊಗ್ಗದಲ್ಲೂ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ಕರೆದು ಸುದೀರ್ಘವಾಗಿ ಚರ್ಚಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದ ಮೊದಲ ದಿನ ಸಂಜೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಆಗಮಿಸಲಿರುವರು. ಅಂತೆಯೇ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರು ಆಗಮಿಸಲಿರುವರು.

ಈ ಉದ್ಘಾಟನಾ ಕಾರ್ಯಕ್ರಮದ ನಂತರ ನಾಡಿನ ಹೆಸರಾಂತ ಗಾಯಕ ರಾಜೇಶ್‌ಕೃಷ್ಣನ್‌ ಅವರಿಂದ ಸಂಗೀತ ಸಂಜೆ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಅದೇ ದಿನ ರಾಜ್ಯದ ಬೇರೆಬೇರೆ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾಪಟುಗಳು ನೋಂದಣಿ ಮಾಡಿಕೊಂಡು ವಸತಿ ಸ್ಥಳದ ಮಾಹಿತಿ ಪಡೆದುಕೊಳ್ಳುವರು ಎಂದವರು ತಿಳಿಸಿದರು.
ಮೇ 19ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ನಿರಂತರವಾಗಿ ವಿವಿಧ ಸಮನಾಂತರ ವೇದಿಕೆಗಳನ್ನು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿವೆ. ಅದೇ ದಿನ ಸಂಜೆ ಜಾನಪದ ದಿಬ್ಬಣ ಎಂಬ ನಾಡಿನ ಜನಪದ ಕಲಾತಂಡಗಳಿಂದ ಕಾರ್ಯಕ್ರಮ ವೈವಿಧ್ಯ ಕಾರ್ಯಕ್ರಮ ಆಯೋಜಿಸಲಾಗಿದ್ದು, ಹೆಸರಾಂತ ಜನಪದ ಕಲಾತಂಡಗಳು ಆಗಮಿಸಲಿವೆ. ಮೇ 20ರಂದು ಎಂದಿನಂತೆ ಬೆಳಿಗ್ಗೆಯಿಂದ ಸಂಜೆಯವರೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿವೆ. ಅಂದು ಸಂಜೆ ಸಮಾರೋಪ ಸಮಾರಂಭವು ಆಹ್ವಾನಿತ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ಪ್ರತಿದಿನ ಸಂಜೆ ನಡೆಯುವ ಮನೋರಂಜನಾ ಕಾರ್ಯಕ್ರಮಗಳಲ್ಲಿ ಆಹ್ವಾನಿತ ಕ್ರೀಡಾಳುಗಳು, ಸ್ಥಳೀಯ ನೌಕರರು, ಅವರ ,ಕುಟುಂಬದವರು ಸೇರಿದಂತೆ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಸುಜಾತಾ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಮೋಹನ್‌ಕುಮಾರ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...