Karnataka State Kadugolla Development Corporation Limited ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದ ಯೋಜನೆಗಳಡಿ 2025-26 ನೇ ಸಾಲಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸದು), ಗಂಗಾ ಕಲ್ಯಾಣ ಯೋಜನೆ(ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಇತರೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು), ಸ್ವಯಂ ಉದ್ಯೋಗ ನೇರಸಾಲ( ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ( ವಾರ್ಷಿಕ ವರಮಾನ ರೂ.15 ಲಕ್ಷ ಮಿತಿಯಲ್ಲಿರಬೇಕು) ಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ನಿಗಮದ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶದನ್ವಯ ಕಾಡುಗೊಲ್ಲ ಜಾತಿಗೆ ಸೇರಿರಬೇಕು, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರಬೇಕು, ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು, ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುತ್ತದೆ.
ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷ. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು, ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು, ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ರೂ.98 ಸಾವಿರ ಮತ್ತು ನಗರ ಪ್ರವೇಶದವರಿಗೆ ರೂ.1,20 ಲಕ್ಷ ಮಿತಿಯೊಳಗಿರಬೇಕು ಹಾಗೂ ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ಇರಿಸಲಾಗಿದೆ.
Karnataka State Kadugolla Development Corporation Limited ಜು.2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಿರಬೇಕು, ಬೆಂಗಳೂರು-ಒನ್/ ಕರ್ನಾಟಕ ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ 080-22374848/7899899039 ಹಾಗೂ ಜಿಲ್ಲೆಗಳಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಕಛೇರಿಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
Karnataka State Kadugolla Development Corporation Limited ಕಾಡುಗೊಲ್ಲ ಅಭಿವೃದ್ದಿ ನಿಗಮದಿಂದ ಸಹಾಯಧನ – ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Date:
