Shivamogga Multipurpose Social Service Society ವಿದ್ಯಾರ್ಥಿಗಳು ಪರಿಸರದ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಅಸಂಘಟಿತ ಕೂಲಿ ಕಾರ್ಮಿಕರ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಕವಿತಾ ಥೋರತ್ ಹೇಳಿದರು.
ಅವರು ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವೀಸ್ ಸೊಸೈಟಿಯಿಂದ ಆಯನೂರಿನ ಮಂಡಘಟ್ಟ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಚೈತ್ರದ ಚಿಗುರು ಮತ್ತು ಪರಿಸರ ದಿನಾಚರಣೆ ಕಾರ್ಯಕ್ರಮಲ್ಲಿ ಮಾತನಾಡಿದರು.
ಪರಿಸರವನ್ನು ಉಳಿಸಿದರೆ ನಾವು ಉಳಿಯುತ್ತೇವೆ. ಆದ್ದರಿಂದ ಪರಿಸರವನ್ನು ನಾಶಮಾಡದೇ ಪರಿಸರ ಉಳಿವಿಗಾಗಿ ಪ್ರತಿಯೊಬ್ಬರು ಜಾಗೃತರಾಗಬೇಕು. ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರ ನಾಶವಾಗುತ್ತದೆ. ಪ್ಲಾಸ್ಟಿಕ್‌ನಿಂದ ಪ್ರಾಣಿ ಸಂಕುಲದ ಮೇಲೂ ಪರಿಣಾಮ ಬೀರುತ್ತಿದೆ. ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಿರುವಂತೆ ಮಕ್ಕಳಲ್ಲಿ ಅರಿವು ಮೂಡಿಸಿದರು.
Shivamogga Multipurpose Social Service Society ಹಸರೀಕರಣಕ್ಕೆ ಆದ್ಯತೆ ಕೊಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮುಂದಿನ ಪೀಳಿಗೆಗೂ ಪರಿಸರ ಉಳಿಯಬೇಕು. ಪ್ರಾಣಿ, ಪಕ್ಷಿಗಳು ನಮ್ಮೊಂದಿಗೆ ಜೀವಿಸುತ್ತವೆ. ನಮ್ಮ ರಾಜ್ಯದಲ್ಲಿ ಪರಿಸರ ಎಂದರೆ ತಕ್ಷಣ ನೆನಪಾಗುವ ಹೆಸರು ಸಾಲುಮರದ ತಿಮ್ಮಕ್ಕ. ನೂರಾರು ಸಸಿಗಳನ್ನು ನೆಟ್ಟು ಪರಿಸರಕ್ಕೆ ಕೊಡುಗೆ ನೀಡಿರುವ ತಿಮ್ಮಕ್ಕ, ತಾವು ನೆಟ್ಟ ಸಾಲು ಸಸಿಗಳಿಂದಲೇ ಸಾಲು ಮರದ ತಿಮ್ಮಕ್ಕ ಎಂಬ ಹೆಸರು ಪಡೆದುಕೊಂಡರು ಎಂದರು.
ಕಾರ್ಯಕ್ರಮದಲ್ಲಿ ಫಾದರ್ ಡಿಸೋಜ, ಸೊಸೈಟಿಯ ಕುಮುದ, ಜಗದೀಶ್, ವಸೂದ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಗ್ರಾಮಸ್ಥರು ಉಪಸ್ಥಿತರಿದ್ದರು.
Shivamogga Multipurpose Social Service Society ವಿದ್ಯಾರ್ಥಿಗಳು ಪರಿಸರದ ಕಾಳಜಿ ಬೆಳೆಸಿಕೊಳ್ಳಬೇಕು: ಕವಿತಾ
Date:
