Saturday, December 6, 2025
Saturday, December 6, 2025

Sri Shivaganga Yoga Center ಯೋಗ ಗುರು ಸಿ.ವಿ. ರುದ್ರಾರಾಧ್ಯ ಅವರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ

Date:

Sri Shivaganga Yoga Center ಶ್ರೀ ಶಿವಗಂಗಾ ಯೋಗ ಕೇಂದ್ರ (ರಿ), ಕಲ್ಲಹಳ್ಳಿ,ವಿನೋಬನಗರ ಶಿವಮೊಗ್ಗ ಇದರ ಸಂಸ್ಥಾಪಕ ಕಾರ್ಯಾಧ್ಯಕ್ಷರಾದ ಯೋಗಾಚಾರ್ಯ ಸಿ.ವಿ. ರುದ್ರಾರಾಧ್ಯ ರವರಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕರ್ನಾಟಕ ಯೋಗ ಶಿಕ್ಷಕರ ಒಕ್ಕೂಟ, ಮೈಸೂರು, ಇವರು ಆಯೋಜಿಸಿದ್ದ ಕರ್ನಾಟಕ ರಾಜ್ಯಮಟ್ಟದ ಸಮ್ಮೇಳನ 2025 ದಲ್ಲಿ ಯೋಗ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಶ್ರೀಯುತರನ್ನು ಗುರುತಿಸಿ ಯೋಗ ರತ್ನಾಕರ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಸಮ್ಮೇಳನದ ಸರ್ವಾಧ್ಯಕ್ಷರಾದ ಬೆಂಗಳೂರಿನ ಎಸ್ ವ್ಯಾಸ ಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಗಳು ಮತ್ತು ಅಧ್ಯಕ್ಷರು, ವೇದ ವಿಜ್ಞಾನ ಗುರುಕುಲಂ ನ ಪ್ರೊ ರಾಮಚಂದ್ರ ಜಿ ಭಟ್ ಕೋಟೆ ಮನೆ ಇವರು ಪ್ರಶಸ್ತಿ ಪ್ರಧಾನ ಮಾಡಿದರು.
Sri Shivaganga Yoga Center ರಾಷ್ಟ್ರಪತಿಯವರಿಂದ ರಾಷ್ಟ್ರಪ್ರಶಸ್ತಿ , ರಾಜ್ಯೋತ್ಸವ ಪ್ರಶಸ್ತಿ ಮತ್ತು ಅನೇಕ ಪ್ರಶಸ್ತಿ ಪುರಸ್ಕೃತರಾದ ಶ್ರೀ ರುದ್ರಾರಾಧ್ಯರಿಗೆ ಈ ಸಂದರ್ಭದಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರದ ಮಹಾಪೋಷಕರಾದ ಶ್ರೀ ಡಾ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು, ಬೆಕ್ಕಿನ ಕಲ್ಮಠ , ಅಧ್ಯಕ್ಷರಾದ ಶ್ರೀ ಎಸ್ ರುದ್ರೇಗೌಡರು, ಕಾರ್ಯಕಾರಿ ಸಮಿತಿಯ ಸದಸ್ಯರಾದ ಹೊಸ ತೋಟ ಸೂರ್ಯನಾರಾಯಣ, ಪೋಷಕರಾದ ಡಾ.ಧನಂಜಯ ಸರ್ಜಿ, ಸಿ.ಎಸ್.ಷಡಕ್ಷರಿ ಇನ್ನು ಹಲವು ಮುಖ್ಯಸ್ಥರು ಮತ್ತು ಯೋಗ ಶಿಕ್ಷಕ ವೃಂದದವರು, ಯೋಗ ಶಿಕ್ಷಣಾರ್ಥಿಗಳು ಹರ್ಷ ವ್ಯಕ್ತಪಡಿಸಿ ಶ್ರೀಯುತರ ಸೇವೆ ಇನ್ನು ಅನೇಕ ವರ್ಷಗಳು ಯೋಗ ಕ್ಷೇತ್ರಕ್ಕೆ ಸಿಕ್ಕಲಿ ಎಂದು ಶುಭ ಹಾರೈಸಿ ಅಭಿನಂದಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...