Saturday, December 6, 2025
Saturday, December 6, 2025

Dr. G. S. Yadav ಜೈವಿಕ ಸಿಎನ್ ಜಿ ಘಟಕಗಳಿಗೆ ಕಾರ್ಬನ್ ಕ್ರೆಡಿಟ್ಸ್ ಬಳಕೆ ಬಗ್ಗೆ ಸಚಿವರೊಂದಿಗೆ ಡಾ.ಜಿಎಸ್.ಯಾದವ್ ಚರ್ಚೆ

Date:

Dr. G. S. Yadav ತರಕಾರಿ ಮತ್ತು ಇತರ ತ್ಯಾಜ್ಯ ಬಳಕೆ ಮಾಡಿ ಬಯೋ ಸಿಎನ್‌ಜಿ ಪ್ಲಾಂಟ್‌ಗಳ ಸ್ಥಾಪನೆಗೆ ಕೇಂದ್ರ ಸರ್ಕಾರದ ಕಾರ್ಬನ್‌ ಕ್ರೆಡಿಟ್ಸ್‌ ಅನುದಾನ ಬಳಕೆ ಬಗ್ಗೆ ದೆಹಲಿಯ ಕೊಸ್ಯಾಂಬೋ ( ಕೌನ್ಸಿಲ್‌ ಆಫ್‌ ಸ್ಟೇಟ್‌ ಅಗ್ರಿಕಲ್ಟರ್‌ ಮಾರ್ಕೆಟಿಂಗ್‌ ಡಿಪಾರ್ಟ್‌ಮೆಂಟ್‌) ವ್ಯವಸ್ಥಾಪಕ ನಿರ್ದೇಶಕ ಡಾ. ಜೆ.ಎಸ್‌. ಯಾದವ್‌ ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಸೋಮವಾರ ಭೇಟಿ ಮಾಡಿ ಚರ್ಚಿಸಿದರು.

ರಾಜ್ಯದಲ್ಲಿ ಬೆಂಗಳೂರಿನ ದಾಸನಪುರ, ಮೈಸೂರು ಮತ್ತು ಕೋಲಾರಗಳಲ್ಲಿ ಈಗಾಗಲೇ ಬಯೋ ಸಿಎನ್‌ಜಿ ಪ್ಲಾಂಟ್‌ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ಅವರು ಡಾ. ಜೆ.ಎಸ್‌. ಯಾದವ್‌ ಅವರ ಗಮನಕ್ಕೆ ತಂದರು.

ತರಕಾರಿ ಮತ್ತಿತರ ತ್ಯಾಜ್ಯ ಬಳಸಿ ಬಯೋ ಗ್ಯಾಸ್‌ ಉತ್ಪಾದನೆ ಮಾಡುವುದರಿಂದ ಪರಿಸರಕ್ಕೆ ವಿಷಕಾರಿ ಅನಿಲ ಸೇರ್ಪಡೆಯಾಗುವುದನ್ನು ತಡೆಗಟ್ಟಬಹುದು. ಘನ ತ್ಯಾಜ್ಯ ನಿರ್ವಹಣೆ ಕಾಯ್ದೆಗೆ ಕೇಂದ್ರ ಸರ್ಕಾರ ಅಕ್ಟೋಬರ್‌ನಲ್ಲಿ ತಿದ್ದುಪಡಿ ತರಲಿದ್ದು, ಈ ಮೂಲಕ ಲಭ್ಯವಾಗುವ ನೆರವನ್ನು ಬಳಕೆ ಮಾಡಿಕೊಂಡು ಎಪಿಎಂಸಿಗಳಲ್ಲಿ ಬಯೋ ಗ್ಯಾಸ್‌ ಪ್ಲಾಂಟ್‌ಗಳನ್ನು ನಿರ್ಮಾಣ ಮಾಡುವುದು ಸೂಕ್ತ ಎಂದು ಡಾ. ಜೆ.ಎಸ್‌. ಯಾದವ್‌ ಸಲಹೆ ಮಾಡಿದರು.

ಪ್ರತಿದಿನ 50 ಟನ್‌ ಉತ್ಪಾದನೆ ಮಾಡಿದರೆ ಮಾತ್ರ ಈ ಯೋಜನೆ ಲಾಭದಾಯಕವಾಗಲಿದೆ. ಇದು ಲಾಭದಾಯಕ ಎಂದಾಗ ಮಾತ್ರ ಖಾಸಗಿಯವರೂ ಬಯೋ ಗ್ಯಾಸ್‌ ಪ್ಲಾಂಟ್‌ ನಿರ್ಮಿಸಲು ಮುಂದೆ ಬರುತ್ತಾರೆ. ರಾಜ್ಯದ ಯಾವ ಯಾವ ಎಪಿಎಂಸಿಗಳಲ್ಲಿ ಪ್ರತಿದಿನ ಎಷ್ಟು ತ್ಯಾಜ್ಯ ಉತ್ಪಾದನೆಯಾಗುತ್ತದೆ. ಎಲ್ಲೆಲ್ಲಿ ಬಯೋಗ್ಯಾಸ್‌ ಪ್ಲಾಂಟ್‌ ನಿರ್ಮಿಸಿದರೆ ಲಾಭದಾಯಕ ಎಂಬುದನ್ನು ಗುರುತಿಸಿ ಯೋಜನೆ ರೂಪಿಸುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬರಲಾಯಿತು.

ಅತಿ ಹೆಚ್ಚು ತ್ಯಾಜ್ಯ ಉತ್ಪಾದನೆಯಾಗುವ ಬೆಂಗಳೂರು, ಮೈಸೂರು ಮತ್ತು ಕೋಲಾರಗಳಲ್ಲಿ ಸ್ಥಾಪನೆ ಮಾಡುವುದು ಸೂಕ್ತ ಎಂಬ ಸಲಹೆ ವ್ಯಕ್ತವಾಯಿತು.

ಹಣ್ಣುಗಳ ಪ್ಯಾಕಿಂಗ್‌ ಮಾಡಲು ಹಾನಿಕಾರಕ ರಾಸಾಯನಿಕ ಬಳಕೆ, ಸೇಬು ಸೇರಿದಂತೆ ಇತರ ಹಲವು ಹಣ್ಣುಗಳ ಬ್ರಾಂಡ್‌ಗಳನ್ನು ಗುರುತಿಸಲು ಅವುಗಳ ಮೇಲೆ ಸ್ಟಿಕ್ಕರ್‌ಗಳನ್ನು ಹಚ್ಚುವುದು ಅಪಾಯಕಾರಿ. ಇಂತಹ ಹಣ್ಣುಗಳ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು, ಈ ಬಗ್ಗೆ ವರ್ತಕರಲ್ಲಿ ಜಾಗೃತಿ ಮೂಡಿಸಬೇಕು ಎಂಬ ಬಗ್ಗೆ ಕೂಡ ಚರ್ಚೆ ನಡೆಯಿತು.

Dr. G. S. Yadav ಆಹಾರ ಸುರಕ್ಷತೆ ಕಾಯ್ದೆಯಲ್ಲಿ ಈ ಎಲ್ಲ ಅಂಶಗಳು ಬರುತ್ತವೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಅಂಶಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ. ಈ ನಿಯಮಗಳನ್ನು ಪಾಲನೆ ಮಾಡಲು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಕಲ್ಲಂಗಡಿ, ಬೆಂಡೆಕಾಯಿ, ಕ್ಯಾರೆಟ್‌ ಸೇರಿದಂತೆ ಕೆಲವು ಹಣ್ಣು, ತರಕಾರಿಗಳಿಗೆ ಕೃತಕ ಬಣ್ಣ ಬಳಕೆ ಮಾಡಲಾಗುತ್ತಿದೆ. ಗರಿಷ್ಠ ಪ್ರಮಾಣದಲ್ಲಿ ಕೀಟನಾಶಕ ಬಳಸುವುದೂ ಕೂಡ ಅಪಾಯಕಾರಿ. ಆದ್ದರಿಂದ ತರಕಾರಿಗೆ ಕೃತಕ ಬಣ್ಣ ಬಳಕೆ ಮತ್ತು ಸಾಧ್ಯವಾದಷ್ಟು ಕಡಿಮೆ ಪ್ರಮಾಣದಲ್ಲಿ ಕೀಟನಾಶಕ ಬಳಸುವ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಇಲ್ಲವಾದರೆ ಭವಿಷ್ಯದ ದಿನಗಳಲ್ಲಿ ಆರೋಗ್ಯದ ಮೇಲೆ ಗರಿಷ್ಠ ಪ್ರಮಾಣದಲ್ಲಿ ದುಷ್ಪರಿಣಾಮ ಬೀರಲಿದೆ ಎನ್ನುವ ಅಂಶಗಳ ಬಗ್ಗೆ ಕೂಡ ಚರ್ಚೆ ನಡೆಯಿತು.

ತೋಟಗಾರಿಕೆ, ಪುಷ್ಪೋದ್ಯಮ ಮತ್ತು ಹೈನುಗಾರಿಕೆ ಉದ್ಯಮದಲ್ಲಿ ಕರ್ನಾಟಕ ರಾಜ್ಯ ಮಂಚೂಣಿಯಲ್ಲಿದೆ ಎಂದು ಸಚಿವ ಶಿವಾನಂದ ಪಾಟೀಲ ಅವರು ಜೆ.ಎಸ್‌.ಯಾದವ್‌ ಅವರ ಗಮನಕ್ಕೆ ತಂದರು. ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕ ಶಿವಾನಂದ ಕಾಪಸೆ, ಅಧೀಕ್ಷಕ ಅಭಿಯಂತರ ರಘುನಂದನ್‌, ಸಚಿವರ ವಿಶೇಷ ಕರ್ತವ್ಯಾಧಿಕಾರಿ ರವಿಪ್ರಕಾಶ್‌, ಕರ್ನಾಟಕ ಕೃಷಿ ಮಾರಾಟ ಮಹಾ ಮಂಡಳದ ಮುಖ್ಯ ಪ್ರಧಾನ ವ್ಯವಸ್ಥಾಪಕ ಚಂದ್ರಕಾಂತ್‌ ಪಾಟೀಲ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...