Padma Awards 2026 ನೇ ಸಾಲಿನ ದೇಶದ ನಾಗರೀಕ ಪ್ರಶಸ್ತಿಗಳಾದ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳಿಗೆ ಜಿಲ್ಲೆಯಲ್ಲಿ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿ ಅತ್ಯತ್ತಮ ಸೇವೆ ಸಲ್ಲಿಸುತ್ತಿರುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು https://awards.gov.in ಅಥವಾ https://padmaawards.gov.in ಮುಖಾಂತರ ಜು.15 ರೊಳಗಾಗಿ ಸಲ್ಲಿಸಿ, ಸಾಫ್ಟ್ ಪ್ರತಿಗಳನ್ನು ಇ-ಮೇಲ್ ವಿಳಾಸ uspoliticaldpar@karnataka.gov.in ಕ್ಕೆ ನೇರವಾಗಿ ಅರ್ಜಿಯನ್ನು ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Padma Awards ಹೆಚ್ಚಿನ ಮಾಹಿತಿಗಾಗಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಶಿವಮೊಗ್ಗ, ದೂ.ಸಂ.08182-200266 ನ್ನು ಹಾಗೂ ಎಲ್ಲಾ ತಾಲ್ಲೂಕು ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸುವAತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ಎಸ್.ಜಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Padma Awards ಪದ್ಮಶ್ರೇಣಿ ಪ್ರಶಸ್ತಿಗಳಿಗಾಗಿ ಪರಿಶಿಷ್ಟ ಪಂಗಡದವರಿಂದ ಅರ್ಜಿಗಳ ಆಹ್ವಾನ
Date:
