District Minority office Shimoga ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ಹಜ್ ಭವನದಲ್ಲಿ ನಡೆಸುವ ಯುಪಿಎಸ್‌ಸಿ/ಐಎಎಸ್ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನಾಂಕವಾಗಿದೆ. ಅರ್ಜಿಯನ್ನುhttps://dom.karnataka.gov.in ವೆಬ್‌ಸೈಟ್ ಅಥವಾ ಅಲ್ಪಸಂಖ್ಯಾತರ ನಿರ್ದೇಶನಾಲಯ, ನಂ 16 ಸಿ, ಮಿಲ್ರ‍್ಸ್ ಟ್ಯಾಂಕ್ ಬೆಡ್ ರಸ್ತೆ, ವಸಂತ ನಗರ ಬೆಂಗಳೂರು 560052 ಇಲ್ಲಿಗೆ ಸಲ್ಲಿಸಬಹುದು.
21 ರಿಂದ 35 ವರ್ಷ ವಯಸ್ಸಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಯುಜಿಸಿ ಇಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರಬೇಕು. ಹಾಗೂ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ಗೆ ಸೇರಿರಬೇಕು, ಅಭ್ಯರ್ಥಿಗಳು ಕಳೆದ 3 ವರ್ಷಗಳಲ್ಲಿ ಕನಿಷ್ಠ ಒಂದು ಬಾರಿಯಾದರು ಯುಪಿಎಸ್‌ಸಿ/ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಗೆ ಹಾಜರಾಗಿರಬೇಕು. ಈ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.8 ಲಕ್ಷಕ್ಕಿಂತ ಮೀರಿರಬಾರದು.
District Minority office Shimoga ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರದ ದೂ.ಸಂ-7676888388, ಭದ್ರಾವತಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ-9538853680, ತೀರ್ಥಹಳ್ಳಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ-8861982835, ಸೊರಬ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ- 9513815513, ಶಿಕಾರಿಪುರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ- 7829136724, ಹೊಸನಗರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ- 9008447029, ಸಾಗರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ-7338222907 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
District Minority office Shimoga ಯುಪಿಎಸ್ ಸಿ/ಐಎ ಎಸ್ ಪರೀಕ್ಷಾ ಪೂರ್ವ ತರಬೇತಿ ಅಭ್ಯರ್ಥಿ ಆಯ್ಕೆಗೆ ಅರ್ಜಿ ಆಹ್ವಾನ.
Date:
