S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ. 3ರ ಕುವೆಂಪು ನಗರದ ನವನಗರ ಬಡಾವಣೆಗೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಜೂನ್ 27 ರ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿದರು.
S.N. Channabasappa ಈ ಸಂದರ್ಭದಲ್ಲಿ ಬಡಾವಣೆಯ ಯುಜಿಡಿ ಹಾಗೂ ರಸ್ತೆಗಳ ಸಮಸ್ಯೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳ ಕುರಿತಂತೆ ಸ್ಥಳೀಯ ನಿವಾಸಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳ ಬಗ್ಗೆ ವಿವರವಾಗಿ ಮಾಹಿತಿ ಸಂಗ್ರಹಿಸಿ, ನಿವಾಸಿಗಳ ಕುಂದು ಕೊರತೆಗಳ ಬಗ್ಗೆ ತಕ್ಷಣವೇ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
