Saturday, December 6, 2025
Saturday, December 6, 2025

S.N. Channabasappa ಕೆಂಪೇಗೌಡರ ಜೀವನ ಶೈಲಿ ಅನುಕರಣೀಯ- ಶಾಸಕ ಚನ್ನಬಸಪ್ಪ

Date:

S.N. Channabasappa ನಾಡಪ್ರಭು ಕೆಂಪೇಗೌಡರು ತಮ್ಮ ದೂರದೃಷ್ಟಿ ಮತ್ತು ಸಾಮೂಹಿಕ ಆಲೋಚನೆಯ ಮೂಲಕ ರಾಜ್ಯವನ್ನು ಕಟ್ಟುವ ಮತ್ತು ಅಭಿವೃದ್ದಿಪಡಿಸುವ ಉತ್ತಮ ಮಾದರಿಯನ್ನು ನೀಡಿದ್ದು, ನಾವೆಲ್ಲರೂ ಇದನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಕುವೆಂಪು ರಂಗಮAದಿರಲ್ಲಿ ಆಯೋಜಿಸಿದ್ದ 516 ನೇ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ದೇಶವನ್ನು ಅನೇಕರು ಆಳ್ವಿಕೆ ಮಾಡಿದ್ದಾರೆ. ಆದರೆ ನಮ್ಮ ನೆನಪಿನಲ್ಲಿ ಸದಾ ಉಳಿಯುವುದು ಕೆಂಪೇಗೌಡ ಆಳ್ವಿಕೆಯ ಕಾಲ. ಹಾಗಾಗಿ ಬೆಂಗಳೂರು ಅಂದರೆ ನಮ್ಮ ಕಣ್ಣ ಮುಂದೆ ಬರುವ ಚಿತ್ರಣ ಕೆಂಪೇಗೌಡರದು. ಇವರು ವಿಜಯನಗರ ಸಾಮ್ರಾಜ್ಯದ ಕಾಲಘಟ್ಟದಲ್ಲೆ ರಾಜ್ಯದ ಅಭಿವೃದ್ದಿಗಾಗಿ ಅನೇಕ ಕಾರ್ಯಗಳನ್ನು ಕೈಗೊಂಡಿದ್ದು, ಆ ದೂರದೃಷ್ಟಿಯ ಆಲೋಚನೆಯಿಂದ ಭವಿಷ್ಯ ಬೆಂಗಳೂರನ್ನು ಕಟ್ಟಿದ್ದಾರೆ.
ಕೆಂಪೇಗೌಡರು ನಾಗರೀಕ ಸಮಾಜಕ್ಕೆ ಏನು ಬೇಕು, ಏನು ಬೇಡ ಎಂಬುದನ್ನು ಅರಿತ್ತಿದ್ದರು. ಆ ದೃಷ್ಟಿಯಿಂದ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗಾಗಿ ಕೆರೆ ಕಟ್ಟೆಗಳನ್ನು ಕಟ್ಟಿಸಿದ್ದರು. ನಾಗರೀಕರಿಗೆ ಅನುಕೂಲ ಮಾಡಿಕೊಟ್ಟರು. ಅಭಿವೃದ್ದಿ ಜೊತೆಗೆ ಕೆಂಪೇಗೌಡರು ಸಾಂಸ್ಕೃತಿಕ, ಕಲೆ, ಸಾಹಿತ್ಯಕ್ಕೂ ಒತ್ತು ನೀಡಿದ್ದು ಯಕ್ಷಗಾನ ಕೃತಿಯನ್ನು ರಚಿಸಿದ್ದಾರೆ. ಅನೇಕ ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಕೆಂಪೇಗೌಡರು ರಾಜ್ಯದ ನಾಗರೀಕರಲ್ಲಿ ಸಾಮಾಜಿಕ ಸಾಮರಸ್ಯದ ಆಲೋಚನೆಯನ್ನು ಮೂಡಿಸಿದ್ದರು. ಇಂತಹ ಮಹನೀಯರ ಜೀವನ ಶೈಲಿಯನ್ನು ವರ್ತಮಾನದಲ್ಲಿ ನಾವೆಲ್ಲಾ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಮಾತನಾಡಿ, ಸರ್ಕಾರವು ಇಂತಹ ಮಹಾನೀಯರ ಜಯಂತಿ ಮಾಡುವ ಮೂಲಕ ಯುವಪೀಳಿಗೆಗೆ ಇತಿಹಾಸವನ್ನು ತಿಳಿಸುವ ಪ್ರಯತ್ನ ಮಾಡುತ್ತಿದೆ. ಕೆಂಪೇಗೌಡರು ನಡೆಸಿದ ಉತ್ತಮ ಆಡಳಿತ ಈಗಿನ ಜನಪ್ರತಿನಿಧಿಗಳಿಗೆ ಸ್ಪೂರ್ತಿಯಾಗಿದೆ. ಆಗಿನ ಕಾಲದಲ್ಲೇ ದೂರದೃಷ್ಟಿಯುಳ್ಳ ಮುಂದಾಲೋಚನೆಯೊAದಿಗೆ ಜನಪ್ರತಿನಿಧಿಗಳು ಆಡಳಿತ ನಡೆಸುವಲ್ಲಿ ಯಾವ ರೀತಿಯ ಅಂಶ ಹಾಗೂ ಚಿಂತನೆಗಳು ಅವಳಡಿಸಿಕೊಳ್ಳುವುದು ಮುಖ್ಯ ಎಂಬುದು ತಿಳಿಸಿದ್ದಾರೆ.
ಕೆಂಪೇಗೌಡರು ಬೆಂಗಳೂರನ್ನು ಕಟ್ಟುವಾಗ ಎಲ್ಲ ಜಾತಿ, ಜನಾಂಗದವರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನಗರ ನಿರ್ಮಿಸಿದರು. ಇತಿಹಾಸಕ್ಕೆ ಬೇಕಾದ ಎಲ್ಲಾ ಕಾರ್ಯವನ್ನು ಮಾಡಿದ್ದಾರೆ. ಅದರ ಫಲವಾಗಿ ಇಂದು ಬೆಂಗಳೂರನ್ನು ವಿಶ್ವವೇ ತಿರುಗಿ ನೋಡುತ್ತಿದೆ ಎಂದು ಹೇಳಿದರು.
S.N. Channabasappa ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ.ಹೆಚ್.ಟಿ.ಕೃಷ್ಣಮೂರ್ತಿ ಉಪನ್ಯಾಸ ನೀಡಿ, ಕೆಂಪೇಗೌಡರು ಒಬ್ಬ ಐತಿಹಾಸಿಕ ವ್ಯಕ್ತಿವಾಗಿದ್ದು, ಇಂತಹ ಜಯಂತಿಗಳ ಮೂಲಕ ಅವರ ಬಗೆಗಿನ ಐತಿಹಾಸಿಕ ಪ್ರಜ್ಞೆಯನ್ನು ಪಡೆದುಕೊಳ್ಳಬೇಕು. ಯುವ ಸಮೂಹವು ಇಂತಹ ಮಹಾನೀಯರ ಬಗ್ಗೆ ಆಸಕ್ತಿ ಮತ್ತು ಆಕರ್ಷಣೆ ಬೆಳಿಸಿಕೊಳ್ಳಬೇಕು. ಇಲ್ಲದಿದ್ದರೆ ಮನುಷ್ಯನ ಬಗ್ಗೆ ಆಸಕ್ತಿ ಕಳೆದುಕೊಳ್ಳಬೇಕಾಗುತ್ತದೆ.
ಇತ್ತೀಚಿಗೆ ಐತಿಹಾಸಿಕ ವ್ಯಕ್ತಿಗಳ ಬಗ್ಗೆ ಅರಿವು ಪಡೆಯುವ ಬದಲು ಅಮಲು ಏರಿಸಿಕೊಳ್ಳುತ್ತಿದ್ದಾರೆ. ಅಂತಹದರಿAದ ದೂರವಿಬೇಕು. ಯಾವುದೇ ವಿಷಯವಾಗಲಿ ಅದು ಬದುಕಿಗೆ ಅರಿವನ್ನು ಮೂಡಿಸುವಂತಾಗಬೇಕು. ಹಾಗಾಗಿ ನಾವೆಲ್ಲಾ ಕೆಂಪೇಗೌಡರ ಇತಿಹಾಸವನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯ ಕಟ್ಟಬೇಕಿದೆ ಎಂದರು.
ಕೆಂಪೇಗೌಡ ಹಾಕಿಕೊಟ್ಟ ಅಡಿಪಾಯದ ಮೇಲೆ ಬೆಂಗಳೂರು ಸಾಗುತ್ತಿದೆ. ಆದರೆ ಇದನ್ನು ಕಟ್ಟುವಾಗ ಅವರ ಹಾದಿ ಅಷ್ಟು ಸುಲಭವಾಗಿರಲಿಲ್ಲ. ಇಡೀ ದಕ್ಷಿಣ ಭಾರತಕ್ಕೆ ಬೆಂಗಳೂರೇ ಕೇಂದ್ರವಾಗಿತ್ತು. ಪೇಟೆಗಳನ್ನು ನಿರ್ಮಿಸಿ ವಾಣಿಜ್ಯ ವಹಿವಾಟುಗಳಿಗೆ ಹಾಗೂ ಕುಶಲಕರ್ಮಿಗಳ ವ್ಯಾಪಾರಕ್ಕೆ ದಾರಿ ಮಾಡಿಕೊಟ್ಟರು. ಹಾಗಾಗಿ ವಿದ್ಯಾರ್ಥಿಗಳು ಕೆಂಪೇಗೌಡರ ಹಾದಿಯನ್ನು ಅರಿತುಕೊಳ್ಳುವುದು ಅವಶ್ಯಕವಾಗಿದೆ ಎಂದರು.
ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಬಿ.ಎ.ರಮೇಶ್ ಹೆಗಡೆ ಮಾತನಾಡಿ, ಕೆಂಪೇಗೌಡರು ಉತ್ತಮ ಆಡಳಿತಗಾರರಲ್ಲದೆ ವಾಸ್ತುಶಿಲ್ಪಿಯೂ ಆಗಿದ್ದರು. ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ಕೋಟೆ, ಕೆರೆ, ಕಟ್ಟೆ ಕಟ್ಟಿಸಿದರು, ಮಾರುಕಟ್ಟೆ ಕಟ್ಟಿದ್ದರು. ಆ ಮೂಲಕ ಸುಂದರ, ಸೌಹಾರ್ಧ ರಾಜ್ಯವನ್ನು ನಿರ್ಮಿಸಿದರು. ವರ್ತಮಾನದಲ್ಲಿ ಬೆಂಗಳೂರಿಗೆ ಗ್ಲೋಬಲ್ ಸಿಟಿ ಆಗಿ ವಿಶ್ವದಲ್ಲಿ ಮನ್ನಣೆ ಸಿಗುತ್ತಿದೆ ಎಂದರೆ ಅದಕ್ಕೆ ಕೆಂಪೇಗೌಡರೇ ಕಾರಣಕರ್ತರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ, ತಾಲ್ಲೂಕು ಒಕ್ಕಲಿಗ ಸಂಘದ ಎ.ಎಸ್.ಚಂದ್ರಕಾAತ್, ಹಾಪ್‌ಕಾಮ್ಸ್ ಅಧ್ಯಕ್ಷ ವಿಜಯ್ ಕುಮಾರ್, ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಭೂಮರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಉಮೇಶ್ ಉಪಸ್ಥಿತರಿದ್ದರು.
(ಪೋಟೋ ಇದೆ)

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...