CM Siddharamaiah ನಾಡಪ್ರಭು ಕೆಂಪೇಗೌಡ ರವರ 516ನೇ ಜಯಂತಿಯ ಅಂಗವಾಗಿ, ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್.ತಂಗಡಗಿ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ನಿಯಮಿತ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
