The Mysore Electrical Industries Ltd ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟಿಸ್ ಲಿಮಿಟೆಡ್‌ನ ಪರವಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಂದು ಕೋಟಿ ರೂಪಾಯಿ ಮೊತ್ತದ ಡಿವಿಡೆಂಡ್ ಚೆಕ್ ಅನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ, ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ, ಶಿವರಾಜ್ ಎಸ್. ತಂಗಡಗಿ, ಸಂಸ್ಥೆಯ ಅಧ್ಯಕ್ಷ ಎಸ್.ಮನೋಹರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ವ್ಯವಸ್ಥಾಪಕ ನಿರ್ದೇಶಕ ಅನಿತಾ.ಸಿ ಹಾಜರಿದ್ದರು.
