ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿಯ ನಾಡಕಚೇರಿಯ ಸೋರುತ್ತಿರುವುದು ಬೆಳಕಿಗೆ ಬಂದಿದೆ.
ಕೊಡೆ ಹಿಡಿದು ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣಗೊಂಡಿದ್ದು ನಗರದ ನಾಡ ಕಚೇರಿಯ ಗೋಳು ಕೇಳುವವರಿಲ್ಲದಂತಾಗಿದೆ.
ಕಂಪ್ಯೂಟರ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಮೇಲೂ ನೀರು ಸುರಿಯುತ್ತಿದೆ. ಹೊಸ ಕಚೇರಿ ಮುಂದೆ ಎರಡು ಅಡಿ ನೀರು ನಿಂತರೇ , ಹಳೆ ಕಚೇರಿಯಲ್ಲಿ ನೀರು ಸುರಿಯುತ್ತಲೇ ಇರುತ್ತದೆ. ಹಲವು ಬಾರಿ ಮನವಿ ಮಾಡಿದರೂ ಮೇಲಾಧಿಕಾರಿಗಳು ನಿರ್ಲಕ್ಷ ಧೋರಣೆ ತೋರುತ್ತಿದ್ದಾರೆ . ಕಂಪ್ಯೂಟರ್ಗಳಿಗೆ ಪ್ಲಾಸ್ಟಿಕ್ ಕವರ್ ಮುಚ್ಚಿ ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದಾರೆ.
