Press Day ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ʼಪತ್ರಿಕಾ ದಿನಾಚರಣೆ 2025ʼ ಕ್ಕೆ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಚಾಲನೆ ನೀಡಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಾನ್ಯತೆ ಪಡೆಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಬಸ್ ಸೌಲಭ್ಯಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿಗಳು ಸಾಂಕೇತಿಕವಾಗಿ ಹತ್ತು ಪತ್ರಕರ್ತರಿಗೆ ಪಾಸ್‌ಗಳನ್ನು ವಿತರಿಸಿದರು. ಪತ್ರಕರ್ತರಿಗೆ ರೂ.5 ಲಕ್ಷವರೆಗೆ ನಗದುರಹಿತ ಉಚಿತ ಆರೋಗ್ಯ ಸೇವೆ ಒದಗಿಸುವ ʼಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆʼಗೆ ಸಾಂಕೇತಿಕವಾಗಿ ಚಾಲನೆ ನೀಡಿದರು. ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನೀಡಲಾಗುವ ಮೊಜೊ ಕಿಟ್‌ಗಳನ್ನು ವಿತರಿಸಲಾಯಿತು. ಮಾಧ್ಯಮ ಅಕಾಡೆಮಿಯ ಕಾರ್ಯಚಟುವಟಿಕೆಗಳ ಚಿತ್ರ ಸಂಪುಟ ಮಾಧ್ಯಮ ಗ್ಯಾಲರಿಯನ್ನು ಅತಿಥಿಗಳು ಬಿಡುಗಡೆ ಮಾಡಿದರು.
Press Day ಈ ಸಮಾರಂಭದಲ್ಲಿ ಹಿರಿಯ ಪತ್ರಕರ್ತರಾದ ಶ್ರೀ ಪಿ ಸಾಯಿನಾಥ್, ಹಿರಿಯ ಸಾಹಿತಿ ಶ್ರೀ ರಹಮತ್ ತರೀಕೆರೆ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಶ್ರೀ ಕೆ ವಿ ಪ್ರಭಾಕರ್, ಮಾನ್ಯ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಶ್ರೀಮತಿ ಬಿ ಬಿ ಕಾವೇರಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ನಸೀರ್ ಅಹಮದ್, ವಾರ್ತಾ ಇಲಾಖೆ ಆಯುಕ್ತರಾದ ಶ್ರೀ ಹೇಮಂತ್ ಎಂ ನಿಂಬಾಳ್ಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಶಿವಾನಂದ ತಗಡೂರು, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಶ್ರೀಮತಿ ಆಯೇಷಾ ಖಾನಂ, ಕಂಠೀರವ ಸ್ಟೇಡಿಯಂ ಅಧ್ಯಕ್ಷರಾದ ಶ್ರೀ ಮೆಹಬೂಬ ಪಾಶ, ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ ಮತ್ತಿತರರು ಉಪಸ್ಥಿತರಿದ್ದರು
