Saturday, December 6, 2025
Saturday, December 6, 2025

Madhu Bangarappa ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ. ಶಿವಮೊಗ್ಗ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳಿಗೆ ಅನುಮೋದನೆ- ಮಧು ಬಂಗಾರಪ್ಪ

Date:

Madhu Bangarappa ನಂದಿಬೆಟ್ಟದಲ್ಲಿ ಜು.2 ರಂದು ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೆ ರೂ. 307.80 ಕೋಟಿ ಮೊತ್ತದ ಕುಡಿಯುವ ನೀರು ಸೇರಿದಂತೆ ಇತರೆ ಯೋಜನೆಗಳ ಕಾಮಗಾರಿಗಳಿಗೆ ಆಡಳಿತಾತ್ಮ ಅನುಮೋದನೆ ದೊರೆತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.
ಗುರುವಾರ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೊಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸೊರಬ ತಾಲ್ಲೂಕಿನ ದಂಡಾವತಿ ಡ್ಯಾಂ ಮಾರ್ಪಡಿತ ಯೋಜನೆ ಕಾಮಗಾರಿಗಳಿಗೆ ಅನುಮೋದನೆ ದೊರೆತಿದ್ದು ಯಾವುದೇ ರೈತರ ಜಮೀನು ಹಾಗೂ ಮನೆಗಳನ್ನು ಮುಳುಗಡೆಗೊಳಿಸದೇ ವಿನ್ಯಾಸಗೊಳಿಸಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದರು.
ಸೊರಬ ತಾಲ್ಲೂಕಿನ ಯಡಗೊಪ್ಪ ಗ್ರಾಮದ ಹತ್ತಿರ ದಂಡಾವತಿ ನದಿಗೆ ರೂ.38.50 ಕೋಟಿ ವೆಚ್ಚದಲ್ಲಿ ಬ್ಯಾರೇಜ್ ನಿರ್ಮಿಸಿ 15 ಕೆರೆಗಳನ್ನು ತುಂಬಿಸುವ ಯೋಜನೆ, ದಂಡಾವತಿ ಮತ್ತು ವರದಾ ನದಿಗಳಿಗೆ ಅಡ್ಡಲಾಗಿ ರೂ.54.70 ಕೋಟಿ ವೆಚ್ಚದಲ್ಲಿ ಬ್ಯಾರೇಜ್ /ಬ್ರಿಡ್ಜ್ ಕಂ ಬ್ಯಾರೇಜ್‌ಗಳನ್ನು ನಿರ್ಮಿಸುವ ಯೋಜನೆ, ಗುಡವಿ ಗ್ರಾಮದ ಹತ್ತಿರ ವರದಾ ನದಿಗೆ ಅಡ್ಡಲಾಗಿ ರೂ.75.60 ಕೋಟಿ ವೆಚ್ದದಲ್ಲಿ ಬ್ಯಾರೇಜ್ ನಿರ್ಮಿಸಿ 0.1017 ಟಿಎಂಸಿ ನೀರನ್ನೆತ್ತಿ 32 ಕೆರೆಗಳನ್ನು ತುಂಬಿಸುವ ಯೋಜನೆಗೆ ಅನುಮೋದನೆ ದೊರೆತಿದೆ.
ಭದ್ರಾವತಿ ತಾಲ್ಲೂಕಿನ ಗೋಣಿಬೀಡು ಗ್ರಾಮದ ಹತ್ತಿರ ರೂ.54 ಕೋಟಿ ಅಂದಾಜು ವೆಚ್ಚದಲ್ಲಿ ಭದ್ರಾನದಿಯಿಂದ 0.19 ಟಿಎಂಸಿ ನೀರನ್ನು ಕಂಬದಾಳ್ ಹೊಸೂರು ಸಿಂಗನಮನೆ, ಗ್ಯಾರೇಜ್ ಕ್ಯಾಂಪ್, ಶಂಕರಘಟ್ಟ, ಹುಣಸೆಕಟ್ಟೆ, ಗೋಣಿಬೀಡು, ತಮ್ಮಡಿಹಳ್ಳಿ, ರಾಮಿನಕೊಪ್ಪ ಮತ್ತು ಸುತ್ತಮುತ್ತಲಿನ ಗ್ರಾಮಗಳ 2 ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಭದ್ರಾವತಿ ಪಟ್ಟಣದ ಭದ್ರಾನದಿ ಎಡ ಮತ್ತು ಬಲದಂಡೆಯ ಪ್ರಹಾಹಪೀಡಿತ ಪ್ರದೇಶಗಳನ್ನು ರಕ್ಷಿಸಲು ರೂ.50 ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಹಾಗೂ ರೂ.35 ಕೋಟಿ ವೆಚ್ಚದಲ್ಲಿ ಭದ್ರಾ ನದಿಗೆ ಅಡ್ಡಲಾಗಿ ರಸ್ತೆ ಸೇತುವೆ ನಿರ್ಮಾಣ ಮತ್ತು ಡೊಣಬಘಟ್ಟ, ಕಾಗೆಕೊಡುಮಗ್ಗೆ, ಹೊಳೆಹೊನ್ನೂರು ಗ್ರಾಮದ ಭದ್ರಾವತಿ ಮುಖ್ಯ ರಸ್ತೆ ನಡುವೆ ಸಂಪರ್ಕ ರಸ್ತೆ ಕಾಮಗಾರಿಗೆ ಅನುಮೋದನೆ ದೊರೆತಿದ್ದು ಇನ್ನು ಒಂದೂವರೆ ವರ್ಷದೊಳಗೆ ಈ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದರು.

Madhu Bangarappa ಹಾಗೂ ಸೊರಬ ತಾಲ್ಲೂಕಿನಲ್ಲಿ ರೂ.561 ಕೋಟಿ ಮೊತ್ತದಲ್ಲಿ ಕುಡಿಯುವ ನೀರು ಯೋಜನೆಗಳಿಗೆ ಅಂದಾಜು ಪಟ್ಟಿ ಸಿದ್ದಪಡಿಸಿದ್ದು ಮುಂದಿನ ದಿನಗಳಲ್ಲಿ ಅನುಮೋದನೆ ಪಡೆಯಲಾಗುವುದು ಎಂದರು.
ಚಂದ್ರಗುತ್ತಿ ಪ್ರಾಧಿಕಾರ ರಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ದೇವಸ್ಥಾನದ ಅಭಿವೃದ್ದಿಗಾಗಿ 20 ಎಕರೆ ಜಮೀನು ಹಸ್ತಾಂತರ ಗೊಂಡಿರುತ್ತದೆ. ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಜಿಲ್ಲಾ ಕ್ರೀಡಾ ಅಭಿವೃದ್ದಿಗೆ ವಿವಿಧ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಪ್ರತಿನಿಧಿಗಳೊಂದಿಗೆ ಜೂ.27 ರಂದು ಸಭೆ ನಡೆಸಿ ಸೂಕ್ತ ಸಲಹೆಸೂಚನೆಗಳನ್ನು ನೀಡಿದ್ದೇನೆ. ನೆಹರು ಕ್ರೀಡಾಂಗಣದ ಸಮಗ್ರ ಅಭಿವೃದ್ದಿಗೆ ರೂ.16.25 ಕೋಟಿ ಸೇರಿದಂತೆ ಒಟ್ಟಾರೆ ಜಿಲ್ಲೆಯ ಸಮಗ್ರ ಕ್ರೀಡಾಭಿವೃದ್ದಿಗೆ 32.25 ಕೋಟಿಗಳ ಪ್ರಸ್ತಾವನೆಯನ್ನು ಪಡೆಯಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...