CM Siddaramaiah ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಕೇಂದ್ರದಲ್ಲಿನ ಬಿಜೆಪಿಯವರು ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ ಎಂದು ಸಿದ್ಧರಾಮಯ್ಯ ಅವರು ಸದ್ಯ ಎದ್ದಿರುವ ಸಿಎಂ ಪಟ್ಟದ ವಿವಾದಗಳ ಬಗ್ಗೆ ಪೂರ್ಣ ವಿರಾಮ ಹಾಕಿದ್ದಾರೆ.
ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ರಾಜ್ಯ ಬಿಜೆಪಿ ಹಗಲುಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ, ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ, ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ? ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಎಚ್ ಡಿ ಕುಮಾರಸ್ವಾಮಿಯವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ಏನು ಮಾಡಿದ್ದಾರೆ? ಏನೂ ಮಾಡದೇ ಸುಳ್ಳು ಹೇಳಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಪಕ್ಷಗಳಿಗೆ ಮಾತಿನ ಚಾಟಿ ಬೀಸಿದ್ದಾರೆ.
CM Siddaramaiah 2 ವರ್ಷದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಳೆಯಿದ್ದರೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದರು. ಜನರು ಸರ್ಕಾರದ ಪರವಾಗಿ ಸುಮ್ಮನೆ ಬರುತ್ತಾರೆಯೇ?
ಎಂದು ತಮ್ಮ ಸರ್ಕಾರದ ಜನಪ್ರಿಯತೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ
