Rotary Shivamogga ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ನೂತನ ಅಧ್ಯಕ್ಷರಾಗಿ ಡಿ.ಕಿಶೋರ್‌ಕುಮಾರ್ ಹಾಗೂ ಕಾರ್ಯದರ್ಶಿಯಾಗಿ ಬಿ.ಆರ್.ಧನಂಜಯ್ ಆಯ್ಕೆಯಾಗಿದ್ದಾರೆ.
ನಗರದದಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಜುಲೈ 11ರಂದು ಸಂಜೆ 6ಕ್ಕೆ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ. ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ಅವರು Rotary Shivamogga ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪದವಿ ಸ್ವೀಕಾರ ಕಾರ್ಯಕ್ರಮ ನಡೆಸಿಕೊಡುವರು.
ರೋಟರಿ ಸಂಸ್ಥೆಯ ವಸಂತ್ ಹೋಬಳಿದಾರ್, ವಲಯ 11ರ ಸಹಾಯಕ ಗವರ್ನರ್ ಲಕ್ಷ್ಮಣ್ ಗೌಡ, ಜೋನಲ್ ಲೆಫ್ಟಿನೆಂಟ್ ಕಿರಣ್‌ಕುಮಾರ್, ನಿಕಟಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್, ನಿಕಟಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, 2025-26ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿರುವರು.
Rotary Shivamogga ಶಿವಮೊಗ್ಗ ರೋಟರಿ (ಪೂರ್ವ)ಅಧ್ಯಕ್ಷರಾಗಿ ಡಿ.ಕಿಶೋರ್ ಕುಮಾರ್, ಕಾರ್ಯದರ್ಶಿಯಾಗಿ ಬಿ.ಆರ್.ಧನಂಜಯ್ ಆಯ್ಕೆ
Date:
