Saturday, December 6, 2025
Saturday, December 6, 2025

Madhu Bangarappa ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ಕನಸು ನನಸಾಗಿದೆ- ಮಧು ಬಂಗಾರಪ್ಪ

Date:

Madhu Bangarappa ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದಾಗಿ ಈ ಭಾಗದ ಜನರ ಕನಸು ನನಸಾಗುತ್ತಿದೆ. ಶೇ.೮೦ ರಷ್ಟು ಕೆಲಸ ಆಗಿದ್ದು ಮೇ ತಿಂಗಳ ವೇಳೆಗೆ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.
ಶುಕ್ರವಾರ ಸಾಗರ ತಾಲ್ಲೂಕಿನ ಹಸುರುಮಕ್ಕಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಣೆ ಮಾಡಿ ಅವರು ಮಾತನಾಡಿದರು.
ಸಾಗರ ತಾಲ್ಲೂಕಿನ ಹಸಿರುಮಕ್ಕಿಯಲ್ಲಿ
ರಾಜ್ಯ ಸರ್ಕಾರದಿಂದ ರೂ. 125.67 ಕೋಟಿ ಮೊತ್ತದಲ್ಲಿ‌ ಹಸಿರುಮಕ್ಕಿ‌ ಸೇತುವೆ ಕಾಮಗಾರಿ ಕೈಗೊಳ್ಳಲಾಗಿದೆ. 1.115 ಕಿ ಲೋ ಮೀಟರ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಹಸಿರುಮಕ್ಕಿ ಕಡೆ 345 ಮೀ ,ಕೊಲ್ಲೂರು ಕಡೆ 165 ಮೀ ಕಾಮಗಾರಿ ನಡೆಯುತ್ತಿದೆ. ಸೇತುವೆ ಅಗಲ ೮.೫೦ ಮೀ(ದ್ವಿಪಥ ಸಂಚಾರ), ೩೪ ತಳಪಾಯಗಳಿವೆ.
ಈಗ ಶೇ. 80 ಕಾಮಗಾರಿ ಪೂರ್ಣಗೊಂಡಿದೆ.
ರೂ. 25 ಕೋಟಿ ಹಣ ಬಿಡುಗಡೆ ಬಾಕಿ ಇದೆ.
ನಮ್ಮ ಸರ್ಕಾರ ಬಂದ ಮೇಲೆ ಕ್ಷಿಪ್ರಗತಿಯಲ್ಲಿ, ಗುಣಮಟ್ಟದ ಕಾಮಗಾರಿ ನಡೆಯುತ್ತಿದ್ದು, ಹಣದ ಕೊರತೆ ಇಲ್ಲ. ಆದಷ್ಟು ಬೇಗ ಸಾರ್ವಜನಿಕರ ಉಪಯೋಗಕ್ಕೆ ಬರಲಿದೆ.
Madhu Bangarappa ಕೆಲವು ಶರಾವತಿ ಸಂತ್ರಸ್ತರಿಂದ ತಮ್ಮ ಭಾಗದಲ್ಲಿ‌ ಸರ್ವೇ ಆಗಿಲ್ಲ, ತಮ್ಮ ಬ್ಲಾಕ್ ನ್ನು ಸರ್ವೇ ಯಲ್ಲಿ ಸೇರಿಸಿಲ್ಲವೆಂಬ ದೂರುಗಳಿವೆ. ನಾವು ಸಂತ್ರಸ್ತರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗಲಿಕ್ಕೆ ಬಿಡುವುದಿಲ್ಲ. ನಿಮ್ಮ ಜೊತೆ ನಾವಿದ್ದೇವೆ. ಏನೇ ಸಮಸ್ಯೆಗಳಿದ್ದರೂ ಅಹವಾಲು ನೀಡಿ, ಸಮಸ್ಯೆಗಳನ್ನು‌ ಖಂಡಿತವಾಗಿ ಬಗೆಹರಿಸುತ್ತೇವೆ. ಆತಂಕಕ್ಕೆ ಒಳಗಾಗುವುದು ಬೇಡ ಎಂದು ಭರವಸೆ ನೀಡಿದರು.
ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಮಾತನಾಡಿ, ನೆನೆಗುದಿಗೆ ಬಿದ್ದಿದ್ದ ಈ ಸೇತುವೆ ಕಾಮಗಾರಿ ಬಗ್ಗೆ ಬೆಳಗಾಂ ಅಧಿವೇಶನದಲ್ಲಿ ಮಾತನಾಡಿ, ಕಾಮಗಾರಿ ಚುರುಕುಗೊಳಿಸಲು ಅನುದಾನಕ್ಕೆ ಕೋರಿಕೆ ಸಲ್ಲಿಸಿದ ಮೇರೆಗೆ ಸರ್ಕಾರ ಮೊದಲ ಹಂತದಲ್ಲಿ‌ ರೂ. 45 ಕೋಟಿ ಹಣ ಬಿಡುಗಡೆ ಮಾಡಿದ್ದು,
ಪ್ರಸ್ತುತ ಸರ್ಕಾರದ ಅವಧಿಯಲ್ಲಿ‌ ಕ್ಷಿಪ್ರಗತಿಯಲ್ಲಿ ಕಾಮಗಾರಿ ನಡೆಯುತ್ತಿದೆ. ಇನ್ನು
26 ಮೀಟರ್ ರಸ್ತೆ ಮಾತ್ರ ಬಾಕಿ ಇದೆ. ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದ ಮದ್ಯ ಕರ್ನಾಟಕ (ದಕ್ಷಿಣ ಒಳನಾಡಿಗೆ), ಉತ್ತರ ಕರ್ನಾಟಕದಿಂದ ಕರಾವಳಿ ಭಾಗಕ್ಕೆ ಸಂಪರ್ಕ ಸಾಧ್ಯ ವಾಗಲಿದೆ. ಮಂಗಳೂರು ಪಟ್ಟಣ, ಮಂಗಳೂರು ಬಂದರು, ಕುಂದಾಪುರ ಪಟ್ಟಣಗಳಿಗೆ ಸಹ ಸಮೀಪವಾಗಲಿದೆ. ಸಾಗರ ತಾಲ್ಲೂಕಿನಿಂದ ಕೊಲ್ಲೂರು, ಉಡುಪಿ ಮುಂತಾದ ಯಾತ್ರಾಸ್ಥಳಗಳಿಗೆ ತೆರಳುವ ಪ್ರವಾಸಿಗರಿಗೆ ಅನುಕೂಲವಾಗಲಿದೆ. ಸ್ಥಳೀಯ ಶಾಲಾ ಮಕ್ಕಳು ಶಾಲೆಗೆ ಹೋಗಲು ಹಾಗೂ ವ್ಯಾಪಾರ ವಹಿವಾಟಿಗೆ ಅನುಕೂಲವಾಗಲಿದೆ ಎಂದರು.
ಈ ವೇಳೆ ಸ್ಥಳೀಯ ಜನ ಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಹಾಜರಿದ್ದರು.
ಸಿಗಂಧೂರು ಸೇತುವೆ ಕಾಮಗಾರಿ ವೀಕ್ಷಣೆ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಸಿಗಂಧೂರು ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...