Thursday, September 17, 2026
Thursday, September 17, 2026

University Of Mysore ಮೈಸೂರಿನ ಚಾಮರಾಜೇಂದ್ರ ದೃಶ್ಯಕಲಾ ಕಾಲೇಜಿನ ಬಿವಿಎ ಪದವಿಗೆ ಆನ್ ಲೈನ್ ಅರ್ಜಿಗೆ ಅವಕಾಶ

Date:

University Of Mysore ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ದೃಶ್ಯಕಲೆಯಲ್ಲಿ ಪ್ರಥಮ ಬ್ಯಾಚುಲರ್ ಆರ್ಫ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ಎಸ್.ಇ.ಪಿ.ಪದ್ಧತಿಯ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

University Of Mysore ಜುಲೈ 07 ರಂದು ಬೆಳಗ್ಗೆ 11.00 ಕ್ಕೆ ಅರ್ಹತಾ ಪರೀಕ್ಷೆ ಹಾಗೂ ಮಧ್ಯಾಹ್ನ 2.00 ಕ್ಕೆ ವೈಯಕ್ತಿಕ ಸಂದರ್ಶನ ಇರುತ್ತದೆ.
ಈ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://uucms.karnataka.gov.in ಅಥವಾ https://www.cavamysore.karnataka.gov.in ಹಾಗೂ ಕಾರ್ಯಾಲಯದ ಸಹಾಯವಾಣಿ 0821-2438931 ನ್ನು ಸಂಪರ್ಕಿಸುವಂತೆ ಕಾಲೇಜಿನ ಡೀನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...