Sunday, August 2, 2026
Sunday, August 2, 2026

Asha Kirana project ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ”ಆಶಾಕಿರಣ ದೃಷ್ಟಿ ಕೇಂದ್ರ” ಗಳಿಗೆ ಚಾಲನೆ

Date:

Asha Kirana project ದೃಷ್ಟಿದೋಷ ನಿವಾರಣೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ‘ಆಶಾಕಿರಣ’ ಯೋಜನೆಯನ್ನು ಮರುವಿನ್ಯಾಸಗೊಳಿಸಲಾಗಿದೆ. ಶಾಶ್ವತ ಪರಿಹಾರಕ್ಕಾಗಿ ನಿರಂತರ ಕಣ್ಣಿನ ಆರೋಗ್ಯ ಸೇವೆ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರಗಳನ್ನು’ ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾರಂಭಿಸಲಾಗುತ್ತಿದೆ.

ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಈಗಾಗಲೇ 393 ಆಶಾಕಿರಣ ದೃಷ್ಟಿ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆ ಒದಗಿಸಲು ಸಜ್ಜಾಗಿ ನಿಂತಿವೆ ಎಂದು ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.

ಇದೇ ತಿಂಗಳು 3 ರಂದು ಬುಧವಾರ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನೂತನ ದೃಷ್ಟಿ ಕೇಂದ್ರಗಳಿಗೆ ಚಾಲನೆ ನೀಡಲಾಗಿದ್ದು, ಏಕಕಾಲಕ್ಕೆ ಎಲ್ಲ ಕೇಂದ್ರಗಳಲ್ಲೂ ಆರೋಗ್ಯ ಸೇವೆ ಪ್ರಾರಂಭವಾಗಿದೆ.

ಸಾರ್ವಜನಿಕರು ಕೇಂದ್ರಗಳಿಗೆ ಭೇಟಿ ನೀಡಿ ಕಣ್ಣಿನ ತಪಾಸಣೆ ನಡೆಸಿಕೊಂಡು, ದೃಷ್ಟಿ ದೋಷ ಇರುವವರು ಉಚಿತ ಕನ್ನಡಕಗಳನ್ನು ಪಡೆಯಬಹುದು.‌

Asha Kirana project ಈ ಮೊದಲು 8 ಜಿಲ್ಲೆಗಳಲ್ಲಿ ಆಶಾಕಿರಣ ಯೋಜನೆ ಯಶಸ್ವಿಯಾಗಿದ್ದು, 1.40 ಕೋಟಿ ಜನರು ನೇತ್ರ ತಪಾಸಣೆಗೆ ಒಳಗಾಗಿದ್ದರು. 24.50 ಲಕ್ಷ ಜನರಿಗೆ ನೇತ್ರದ ತೊಂದರೆಗಳನ್ನ ಪತ್ತೆ ಹಚ್ಚಿ ಸೂಕ್ತ ಉಚಿತ ಚಿಕಿತ್ಸೆ ಒದಗಿಸಲಾಗಿದೆ. ಇವರಲ್ಲಿ 4.3 ಲಕ್ಷ ಜನರಿಗೆ ಉಚಿತ ಕನ್ಮಡಕ ವಿತರಿಸಲಾಗಿದ್ದು, 1.05 ಲಕ್ಷ ಜನರಿಗೆ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.. ಇನ್ಮುಂದೆ ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲೂ ಹೆಚ್ಚು ಪರಿಣಾಮಕಾರಿಯಾಗಿ ಕಣ್ಣಿನ ಆರೋಗ್ಯ ಸೇವೆ ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...