Saturday, December 6, 2025
Saturday, December 6, 2025

S.N.Chennabasappa ಅವರಿಗೆ ತೊಂದರೆಯಾದರೆ ಈ ಭಾಗದಲ್ಲಿ ವಾಸಿಸಲು ಅರ್ಹರಲ್ಲ” ಶಾಸಕ ಚೆನ್ನಿ ಅವರ ಖಾರ ಪ್ರತಿಕ್ರಿಯೆ

Date:

S.N.Chennabasappa ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಗಣಪತಿ ಮತ್ತು ನಾಗರ ವಿಗ್ರಹ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಶಿವಮೊಗ್ಗ ನಗರ ಶಾಸಕರಾದ ಶ್ರೀ ಚನ್ನಬಸಪ್ಪನವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕೃತ್ಯದ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ರಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ಘಟನೆಯ ಕುರಿತು ಸ್ಥಳೀಯರೊಂದಿಗೆ ಮಾತನಾಡಿದ ಶಾಸಕ ಚನ್ನಬಸಪ್ಪನವರಿಗೆ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ದ್ವಂಸಗೊಳಿಸಲಾದ ದೇವರ ವಿಗ್ರಹಗಳ ಎದುರು ಭಾಗದಲ್ಲಿರುವ ಅನ್ಯಕೋಮಿನ ಮನೆ ಅಕ್ರಮವಾಗಿ ನಿರ್ಮಿಸಿದ್ದು, ಆ ಮನೆಯ ನಿವಾಸಿಗಳು ಪ್ರತಿದಿನ ಬೆಳಗ್ಗೆ ಎದ್ದ ಕೂಡಲೇ ಈ ದೇವರ ವಿಗ್ರಹಗಳನ್ನು ನೋಡಬೇಕಾಗುತ್ತದೆ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, “ಅವರಿಗೆ ತೊಂದರೆಯಾದರೆ, ಅವರು ಈ ಭಾಗದಲ್ಲಿ ವಾಸಿಸಲು ಅರ್ಹರಲ್ಲ” ಎಂದು ಖಾರವಾಗಿ ನುಡಿದರು.

ತಕ್ಷಣವೇ ಕಾರ್ಯಪ್ರವೃತ್ತರಾದ ಶಾಸಕ ಚನ್ನಬಸಪ್ಪನವರು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಿಗೆ ದೂರವಾಣಿ ಕರೆ ಮಾಡಿ, ಅಕ್ರಮವಾಗಿ ನಿರ್ಮಿಸಲಾದ ಮನೆಯ ದಾಖಲಾತಿಗಳನ್ನು ಪರಿಶೀಲಿಸಿ, ಅದು ಅಕ್ರಮವಾಗಿದ್ದರೆ ತಕ್ಷಣವೇ ತೆರವುಗೊಳಿಸುವಂತೆ ಸೂಚನೆ ನೀಡಿದರು.

ಅಲ್ಲದೆ, ಬಂಗಾರಪ್ಪ ಬಡಾವಣೆಯಲ್ಲಿ ವಾಸಿಸುತ್ತಿರುವ ಹಿಂದೂ ಜನಗಳಿಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆಯೂ ಪೊಲೀಸ್ ಇಲಾಖೆಗೆ ತಿಳಿಸಿದರು.

S.N.Chennabasappa ಈ ಸಂದರ್ಭದಲ್ಲಿ, ಬಿಜೆಪಿ ನಗರ ಅಧ್ಯಕ್ಷರಾದ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ದೀನದಯಾಳು, ಮಂಜುನಾಥ್ ಕೆ ನವಲೆ, ಮಾಧ್ಯಮ ಸಂಚಾಲಕ ಶ್ರೀನಾಗ, ಸ್ಥಳೀಯ ಪ್ರಮುಖರು, ಮತ್ತು ಬಂಗಾರಪ್ಪ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.

ಈ ಘಟನೆ ಸ್ಥಳೀಯ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮತ್ತು ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...