Delhi Words School ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ನಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಬೇಕು ಎಂದು ತುಂಗಾನಗರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ರಘುವೀರ್ ಹೇಳಿದರು.
ಅವರು ನಗರದ ಡೆಲ್ಲಿ ವರ್ಡ್ಸ್ ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಸಮಾಜದ ಮುಂದಿನ ಗುರುತರ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಕ್ಕಳ ಸಹಾಯವಾಣಿ ಸಂಖ್ಯೆ-1098, ಕಾನೂನಿನಲ್ಲಿ ಮಕ್ಕಳಿಗೆ ಇರುವ ಹಕ್ಕುಗಳು, ಮಕ್ಕಳಿಗೆ ಶಿಕ್ಷಣದ ಮಹತ್ವ, ಪೋಕ್ಸೋ ಕಾಯ್ದೆಯ ಬಗ್ಗೆ ಅರಿವು ಮೂಡಿಸಿದರು.
ಹಿರಿಯ ಸೈನಿಕ ಅಧಿಕಾರಿ ಸುಬೇದಾರ್ ಪರಮಜಿತ್ ಸಿಂಗ್ ಮಾತನಾಡಿ, ಇಂದಿನ ಮಕ್ಕಳೇ ಮುಂದೆ ದೇಶವನ್ನು ಬಲಿಷ್ಠ ಗೊಳಿಸುವ ಮಹಾ ನಾಯಕರು ಎಂದರು.
Delhi Words School ಶಾಲೆಯ ಪ್ರಾಂಶುಪಾಲರಾದ ದಿವ್ಯ ಶೆಟ್ಟಿ ಅವರು ಮಾತನಾಡಿ, ಮಕ್ಕಳು ಚಿಕ್ಕವಯಸ್ಸಿನಿಂದಲೇ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಉತ್ತಮ ಮಾದರಿ ನಾಯಕರಾಗಿ ಬೆಳೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಶಿನಾಥ್, ಶಾಲೆಯ ಶಿಕ್ಷಕವೃಂದ, ಆಡಳಿತ ಮಂಡಳಿ, ತುಂಗಾನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಆಫಶೀನ್ ನಿರೂಪಿಸಿ, ವಿದ್ಯಾರ್ಥಿ ಮಹಮ್ಮದ್ ಕೈಫ್ ಸ್ವಾಗತಿಸಿ, ವಿದ್ಯಾರ್ಥಿನಿ ಸಾಕ್ಷಿ ವಂದಿಸಿದರು.
Delhi Words School ಸಮಾಜದ ಮುಂದಿನ ಗುರುತರ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ- ರಘುವೀರ್
Date:
