Sunday, June 21, 2026
Sunday, June 21, 2026

Daivajna Samaj Sangha ಜುಲೈ 10 ರಿಂದ ದಾವಣಗೆರೆಯಲ್ಲಿ ಕರ್ಕಿ ಕ್ಷೇತ್ರದ ದೈವಜ್ಞ ಬ್ರಾಹ್ಮಣ ಮಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರಿ ಶ್ರೀಗಳ ಚಾತುರ್ಮಾಸ್ಯ ವ್ರತ

Date:

Daivajna Samaj Sangha ದಾವಣಗೆರೆಯ ಪಿಬಿ ರಸ್ತೆಯ ರೇಣುಕಾ ಬಡಾವಣೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ದೈವಜ್ಞ ಸಮಾಜ ಸಂಘ, ಚಾತುರ್ಮಾಸ್ಯ ವ್ರತೋತ್ಸವ ಸಮಿತಿಯಿಂದ ಜುಲೈ 10ರಿಂದ ಸೆಪ್ಟೆಂಬರ್ 7ರವರೆಗೆ ಚಾತುರ್ಮಾಸ್ಯ ವ್ರತ 2025 ಹಮ್ಮಿಕೊಳ್ಳಲಾಗಿದೆ.

ಹೊನ್ನಾವರದ ಶ್ರೀ ಕ್ಷೇತ್ರ ಕರ್ಕಿಯ ದೈವಜ್ಞ ಬ್ರಾಹ್ಮಣ ಮಠದ ಶ್ರೀ ಜ್ಞಾನೇಶ್ವರಿ ಪೀಠದ ದೇವಜ್ಞ ಬ್ರಾಹ್ಮಣ ಮಠಾಧೀಶ್ವರರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರಿ ಭಾರತೀ ಸ್ವಾಮೀಜಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತ ಹಮ್ಮಿಕೊಳ್ಳಲಾಗಿದೆ.

ಜುಲೈ 10ರಂದು ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿ ಅವರು ಚಾತುರ್ಮಾಸ್ಯ ವ್ರತವನ್ನು ದ್ವಿತೀಯ ಬಾರಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿ ಅವರು ಈ ಸಂವತ್ಸರದ ಚಾತುರ್ಮಾಸ್ಯ ವ್ರತ ಸಂಕಲ್ಪವನ್ನು ದೇವನಗರಿ ದಾವಣಗೆರೆಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ವ್ಯಾಸಾದಿ ಗುರುಗಳ ಪೂಜೆಯೊಂದಿಗೆ ನೆರವೇರಿಸಲು ನಿಶ್ಚಯಿಸಿದ್ದಾರೆ.

Daivajna Samaj Sangha ಚಾತುರ್ಮಾಸ್ಯ ಮಹಾಪರ್ವದ ಶ್ರೀ ಗುರು ಪಾದುಕಾ ಪೂಜಾದಿ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ವಿಶೇಷ ಉದ್ಯಾಪನೆ, ಹೋಮ ಹವನಗಳಲ್ಲಿ ಹಾಗೂ ಪೂಜೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ದೈವಜ್ಞ ಗುರುಪೀಠ ಸಮಿತಿ ಅಧ್ಯಕ್ಷ ಚಂದ್ರಹಾಸ ಪಿ.ರಾಯ್ಕರ್ ತಿಳಿಸಿದ್ದಾರೆ. ಮಾಹಿತಿಗೆ 9448154495 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...