Department of Social Welfare ಸಾಗರ ಸಮಾಜ ಕಲ್ಯಾಣ ಇಲಾಖೆಯು ತಾಲೂಕು ಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದ ನಿರ್ವಹಣಾ ಸಮಿತಿಗೆ ಪರಿಶಿಷ್ಟ ಜಾತಿಗೆ ಸೇರಿದ ಮೂರು ಜನ ನಾಮನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಜು. 15 ರೊಳಗಾಗಿ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಾಗರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 9480843192 ನ್ನು ಸಂಪರ್ಕಿಸುವುದು.
