Sunday, December 7, 2025
Sunday, December 7, 2025

Bharat Scout and Guide ಸ್ಕೌಟ್ಸ್ & ಗೈಡ್ಸ್ ಚಟುವಟಿಕೆಯಲ್ಲಿ ಶಿವಮೊಗ್ಗ ಜಿಲ್ಲೆಯನ್ನ ರಾಜ್ಯದಲ್ಲಿ ಮಾದರಿಯಾಗಿಸೋಣ- ಎಸ್.ಗಂಗಪ್ಪ ಗೌಡ

Date:

Bharat Scout and Guide ಕರ್ನಾಟಕ ರಾಜ್ಯ ಭಾರತ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ರಾಜ್ಯ ಕಾರ್ಯದರ್ಶಿಗಳು ನಿವೃತ್ತ ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಮಾನ್ಯ ಶ್ರೀ ಎಸ್ ಗಂಗಪ್ಪ ಗೌಡರವರು ಶಿವಮೊಗ್ಗ ಜಿಲ್ಲೆಯ ನೋಡಲ್ ಅಧಿಕಾರಿಯಾಗಿ ನಿಯುಕ್ತಿ ಗೊಂಡ ನಂತರ ಶಿವಮೊಗ್ಗ ಜಿಲ್ಲಾ ಸಂಸ್ಥೆಗೆ ಭೇಟಿ ನೀಡಿ ಜಿಲ್ಲಾ ಸ್ಕೌಟ್ ಭವನದಲ್ಲಿ ಆಯೋಜಿಸಲಾಗಿದ್ದ ಪ್ರಥಮ ಪ್ರಗತಿ ಪರಿಶೀಲನ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಮುಂದುವರೆದ ಅವರು ಜಿಲ್ಲಾ ಸಂಸ್ಥೆಯ ಎಲ್ಲಾ ಸ್ಥಳೀಯ ಸಂಸ್ಥೆಯ ಕಾರ್ಯ ಚಟುವಟಿಕೆಗಳು ಉತ್ತಮವಾಗಬೇಕು ಗುಣಾತ್ಮಕವಾಗಿಯೂ ಮತ್ತು ಧನಾತ್ಮಕವಾಗಿಯೂ ಮುಂದುವರೆಯಬೇಕೆಂದು ಹೇಳಿದರು ಇದಕ್ಕಾಗಿ ಶಿಕ್ಷಣ ಇಲಾಖೆಯ ಪ್ರೋತ್ಸಾಹ ಹಾಗೂ ಎಲ್ಲಾ ಹಂತದ ಅಧಿಕಾರಿಗಳ ಸಹಯೋಗದೊಂದಿಗೆ ಕೆಲಸ ಮಾಡೋಣ ಎಂದರು.

ಇದರೊಂದಿಗೆ ತರಬೇತಿ ನಾಯಕರನ್ನು ಹೆಚ್ಚಿಸುವುದು, ರಾಜ್ಯ ಪುರಸ್ಕಾರ ಮತ್ತು ರಾಷ್ಟ್ರಪತಿ ಪದಕ ಪಡೆಯಲು ಮಕ್ಕಳಿಗೆ ಪ್ರೋತ್ಸಾಹ ನೀಡುವುದು ಹಾಗೂ ಅವರುಗಳು ಸ್ಥಳೀಯ, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಶಿಬಿರಗಳಲ್ಲಿ ಮತ್ತು ತರಬೇತಿಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸುವುದು ಸಹ ಒಳಗೊಂಡಿರಬೇಕೆಂದು ಸಲಹೆ ನೀಡಿದರು.

ಸ್ಥಳೀಯ ಮತ್ತು ಜಿಲ್ಲಾ ಹಂತಗಳಲ್ಲಿ ಶಿಕ್ಷಕ ಮತ್ತು ಶಿಕ್ಷಕರಿಗೆ ಮೂಲ ತರಬೇತಿ ಶಿಬಿರಗಳನ್ನು ಏರ್ಪಡಿಸಲು ಸೂಚಿಸಿದರು.
ಶಿವಮೊಗ್ಗ ಜಿಲ್ಲೆಯು ಹಿಂದಿನ ಎಲ್ಲಾ ಪದಾಧಿಕಾರಿಗಳ ನಿಸ್ವಾರ್ಥ ಸೇವೆಯಿಂದ ರಾಜ್ಯದಲ್ಲಿಯೇ ಉತ್ತಮವಾದಂತಹ ಹೆಸರನ್ನು ಪಡೆದ ಜಿಲ್ಲೆಯಾಗಿದ್ದು ಇದನ್ನು ಎಲ್ಲರೂ ಸೇರಿ ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯಾಗಿ ರೂಪುಗೊಳ್ಳಿಸೋಣ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀಮತಿ ಶಕುಂತಲಾ ಚಂದ್ರಶೇಖರ್ ಅವರು ಮಾತನಾಡುತ್ತಾ ರಾಜ್ಯ ಸಂಸ್ಥೆಯ ಮಾರ್ಗದರ್ಶನ ಮತ್ತು ಸಹಕಾರದಲ್ಲಿ ಶಿವಮೊಗ್ಗ ಜಿಲ್ಲಾ ಸಂಸ್ಥೆಯು ಎಲ್ಲಾ ಚಟುವಟಿಕೆಗಳನ್ನು ಯಶಸ್ವಿಯಾಗಿ ಮಾಡುತ್ತದೆ ಎಂದು ಹೇಳುತ್ತಾ ಪ್ರಸ್ತುತ ಈ ವರ್ಷ ರಾಜ್ಯ ಸಂಸ್ಥೆ ಕೊಟ್ಟಿರುವಂತಹ ಗುರಿಯನ್ನು ಸರ್ವರ ಸಹಕಾರದಲ್ಲಿ ಮುಟ್ಟುತ್ತೇವೆ ಎಂದು ಭರವಸೆ ನೀಡಿದರು

ಸಭೆಯು ಸ್ಕೌಟ್ ಗೈಡ್ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ ಶ್ರೀ ಕೆ ರವಿ ಜಿಲ್ಲಾ ಆಯುಕ್ತರು ರೋವರ್ ಸರ್ವರನ್ನು ಸ್ವಾಗತಿಸಿದರು.

ಈ ಸಭೆಯಲ್ಲಿ ಜಿಲ್ಲಾ ಆಯುಕ್ತರು ಸ್ಕೌಟ್ ಶ್ರೀ ಎಸ್ ಜಿ ಆನಂದ್, ಕೇಂದ್ರ ಸ್ಥಾನಿಕ ಆಯುಕ್ತ ಶ್ರೀ ಜಿ ವಿಜಯಕುಮಾರ್, ಜಿಲ್ಲಾ ಖಜಾಂಚಿ ಶ್ರೀ ಚುಡಾಮಣಿ ಈ. ಪವಾರ್, ಜಿಲ್ಲಾ ಜಂಟಿ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮಿ ಕೆ ರವಿ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀ ವೈ ಆರ್ ವೀರೇಶಪ್ಪ, ಜಿಲ್ಲಾ ಸ್ಕೌಟ್ ತರಬೇತಿ ಆಯುಕ್ತ ಶ್ರೀ ಎಚ್ ಶಿವಶಂಕರ್, ಜಿಲ್ಲಾ ಗೈಡ್ ತರಬೇತಿ ಆಯುಕ್ತೆ ಶ್ರೀಮತಿ ಗೀತಾ ಚಿಕ್ಕಮಠ್, ಜಿಲ್ಲೆಯ ಸೊರಬ ತಾಲೂಕಿನ ಕಾರ್ಯದರ್ಶಿ ಶ್ರೀ ಶೇಖರಪ್ಪನವರು, ಖಜಾಂಜಿ ಶ್ರೀಮತಿ ಜ್ಯೋತಿ, ತೀರ್ಥಹಳ್ಳಿ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಶ್ರೀ ಮಂಜುನಾಥ, ಭದ್ರಾವತಿ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಶ್ರೀ ಹರೀಶ್, ಸಾಗರ ಸ್ಥಳಿಯ ಸಂಸ್ಥೆಯ ಸಹ ಕಾರ್ಯದರ್ಶಿ ಶ್ರೀ ವೆಂಕಟೇಶ್, ಶಿವಮೊಗ್ಗ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಶ್ರೀ ರಾಜೇಶ್ ವಿ ಅವಲಕ್ಕಿ, ಶಿಕಾರಿಪುರ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀರಾಮಚಂದ್ರಪ್ಪ ಮತ್ತು ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯದರ್ಶಿ ಶ್ರೀ ಕೆ. ವಿ. ಚಂದ್ರಶೇಖರಯ್ಯನವರು ಸರ್ವರನ್ನು ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...