Scouts and Guides ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳಲ್ಲಿ ದೇಶಪ್ರೇಮ ಪ್ರಾಮಾಣಿಕತೆ ಸಮಾಜ ಸೇವೆ ಆತ್ಮವಿಶ್ವಾಸ ಮುಂತಾದ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ನೀಡುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ ಹೆಗಡೆ
ಯವರು ಅಭಿಮತ ವ್ಯಕ್ತಪಡಿಸಿದರು.
ತಮ್ಮ ಕಚೇರಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ವಾರ್ಷಿಕ ಕಾರ್ಯಕ್ರಮಗಳ ಯೋಜನೆ ಪುಸ್ತಕವನ್ನು ಅನಾವರಣ ಮಾಡಿ ಮಾತನಾಡಿದರು. ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆ ಜೊತೆಗೆ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸ್ಕೌಟ್ಸ್ ಅಂಡ್ ಗೈಡ್ಸ್ ತುಂಬಾ ಸಹಕಾರಿಯಾಗಿದೆ ಎಂದು ನುಡಿದರು ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯ ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ. ( ಸಿ ಇ ಓ ) ಹೇಮಂತ್ ಎನ್ ರವರು ಮಾತನಾಡುತ್ತಾ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮ ಆಧ್ಯಾತ್ಮ ಕೌಶಲ್ಯ ಹಾಗೂ ದೇಶಪ್ರೇಮವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದು ನುಡಿದರು.
Scouts and Guides ಪರೀಕ್ಷಾರ್ಥ ಐಎಎಸ್ ಅಧಿಕಾರಿ ನಾಗೇಂದ್ರ ಬಾಬು ಉಪಸ್ಥಿತರಿದ್ದರು. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ. ಜಿಲ್ಲಾ ಪ್ರಧಾನ ಆಯುಕ್ತರಾದ ಶಕುಂತಲಾ ಚಂದ್ರಶೇಖರ್ ಅವರು ಮಾತನಾಡುತ್ತಾ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಆದೇಶದ ಮೇರೆಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರಯ್ಯ. ಸಹ ಕಾರ್ಯದರ್ಶಿ ವೈಆರ್ ವೀರೇಶಪ್ಪ. ಸ್ಕೌಟ್ಸ್ ಆಯುಕ್ತರಾದ ಎಸ್ ಜಿ ಆನಂದ್. ಕೇಂದ್ರ ಸ್ಥಾನಿಕ ಆಯುಕ್ತರಾದ ಜಿ ವಿಜಯಕುಮಾರ್. ರಾಜ್ಯ ಸಂಘಟನಾ ಆಯುಕ್ತರಾದ ಸುಮನ್ ಶೇಖರ್. ಸ್ಕೌಟ್ಸ್ ಅಂಡ್ ಗೈಡ್ಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
