Gajanur Dam ಶಿವಮೊಗ್ಗ ಜಿಲ್ಲೆ ಗಾಜನೂರು ಡ್ಯಾಂನಿಂದ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶಗಳಿಗೆ ದಿನಾಂಕ:14.07.2025 ರಿಂದ ನೀರು ಹರಿಸಲಾಗುವುದು. ಅಚ್ಚುಕಟ್ಟು ರೈತರಿಗೆ ಹಾಗೂ ಸಾರ್ವಜನಿಕರಿಗೆ, ಜನ, ಜಾನುವಾರುಗಳೊಂದಿಗೆ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆಯಿಂದಿರಲು ಕಾರ್ಯಪಾಲಕ ಇಂಜಿನಿಯರ್, ತುಂ ಮೇ ಯೋ, ವಿಭಾಗ ಇವರು ತಿಳಿಸಿದ್ದಾರೆ.
Gajanur Dam ಗಮನಿಸಿ, ಜುಲೈ 14 ರಂದು ಗಾಜನೂರು ಡ್ಯಾಂ ನಿಂದ ತುಂಗಾ ಮೇಲ್ದಂಡೆ ಕಾಲುವೆಗೆ ನೀರು ಹರಿಸಲಾಗುವುದು
Date:
