CM Siddaramaiah ನಟ ಯುವ ರಾಜ್‌ಕುಮಾರ್ ಅವರು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಭೇಟಿಯಾಗಿ, ಜುಲೈ 18 ರಂದು ತೆರೆ ಕಾಣಲಿರುವ ತಾವು ನಾಯಕನಟನಾಗಿ ಅಭಿನಯಿಸಿರುವ “ಎಕ್ಕ” ಸಿನಿಮಾ ಪ್ರೀಮಿಯರ್ ಶೋ ವೀಕ್ಷಣೆಗೆ ಆಗಮಿಸುವಂತೆ ಪ್ರೀತಿಯಿಂದ ಆಹ್ವಾನಿಸಿದರು.
ರಾಜ್‌ಕುಮಾರ್ ಅವರ ಕುಟುಂಬದ ಜೊತೆಗಿನ ನನ್ನ ಒಡನಾಟ ನಾಲ್ಕೈದು ದಶಕಗಳಷ್ಟು ಹಳೆಯದು. ರಾಘವೇಂದ್ರ ರಾಜ್‌ಕುಮಾರ್, ಶಿವಣ್ಣ ಮತ್ತು ಅಪ್ಪು ತಮ್ಮ ತಂದೆಯಂತೆ ಅಭಿನಯದಲ್ಲಿ ಮಾತ್ರವಲ್ಲ, ಸಾಮಾಜಿಕ ಕಳಕಳಿಯಲ್ಲೂ ಎತ್ತಿದಕೈ. ರಾಜಣ್ಣನ ಕುಟುಂಬದ ಮೂರನೇ ತಲೆಮಾರು ಅದೇ ಹಾದಿಯಲ್ಲಿ ಹೆಜ್ಜೆಹಾಕಲು ಆರಂಭಿಸಿದ್ದು ಕಂಡು ಸೀಎಂ ಸಿದ್ಧರಾಮಯ್ಯ ಖುಷಿ ವ್ಯಕ್ತಪಡಿಸಿದರು.
CM Siddaramaiah ಚಿತ್ರ ಯಶಸ್ವಿಯಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.
