Actress B. Saroja Devi ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ ನಿಧನರಾಗಿದ್ದಾರೆ
ಅವರಿಗೆ 87 ವರ್ಷ ವಯಸ್ಸಾಗಿತ್ತು..
ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ ಅವರ ನಿಧನದ ಸುದ್ದಿ ಹೃದಯ ವಿದ್ರಾವಕ. ಕನ್ನಡ ಚಿತ್ರರಂಗ ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಸುಮಾರು 200 ಚಿತ್ರಗಳಲ್ಲಿ ನಟಿಸಿದ್ದ ಅವರು ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು.
“ಕಿತ್ತೂರು ಚೆನ್ನಮ್ಮ,” “ಬಬ್ರುವಾಹನ “ಮತ್ತು “ಅಣ್ಣ ತಂಗಿ”ಯಂತಹ ಚಿತ್ರಗಳಲ್ಲಿನ ಅವರ ಅಭಿನಯ ನೆನಪಿಗೆ ಬರುತ್ತದೆ.
Actress B. Saroja Devi ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕೆ ದೊಡ್ಡ ನಷ್ಟ. ಸರೋಜಾದೇವಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಅಗಲಿಕೆಯ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
