Saturday, December 6, 2025
Saturday, December 6, 2025

Bhadravati Social Welfare Department ಭದ್ರಾವತಿಯಲ್ಲಿನ ಮೆಟ್ರಿಕ್ ಪೂರ್ವ & ನಂತರದ ‌ವಿದ್ಯಾರ್ಥಿ ವೇತನಕ್ಕೆ ‌ಅರ್ಜಿ ಆಹ್ವಾನ

Date:

Bhadravati Social Welfare Department ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ನವೀನ ಹಾಗೂ ನವೀಕರಣ ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದಲ್ಲಿ (ಎನ್.ಎಸ್.ಪಿ) https://ssp.postmatric.karnataka.gov.in/ssppre ರಲ್ಲಿ ದಿ:31/10/2025ರೊಳಗಾಗಿ ಅರ್ಜಿ ಸಲ್ಲಿಸುವುದು ಹಾಗೂ ಮೆಟ್ರಿಕ್ ನಂತರದ ನವೀನ ಹಾಗೂ ನವೀಕರಣ ವಿದ್ಯಾರ್ಥಿವೇತನ ಪಡೆಯಲು SSP ರಲ್ಲಿ SAT ID ಮುಖಾಂತರ ಅರ್ಜಿ ಸಲ್ಲಿಸುವಂತೆ ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಶಿವಮೊಗ್ಗ ತಾಲ್ಲೂಕು ಸಹಾಯಕ ನಿರ್ದೇಶಕರು) ತಿಳಿಸಿದ್ದಾರೆ.
Bhadravati Social Welfare Department ಅರ್ಜಿ ಸಲ್ಲಿಸಲು ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾಥಿಯ ಆಧಾರ್ ಸಂಖ್ಯೆ/ಇ.ಐ.ಡಿ. ಸಂಖ್ಯೆ ಮತ್ತು ಆಧಾರ್‌ನಲ್ಲಿರುವ ಹೆಸರು ಒಂದೇ ಆಗಿರಬೇಕು. ಪೋಷಕರ ಆಧಾರ್/ಇ.ಐ.ಡಿ. ಮತ್ತು ಆಧಾರ್ / ಇ.ಐ.ಡಿ.ಯಲ್ಲಿ ನಮೂದಿಸಿರುವಂತೆ ಹೆಸರು, ವಿದ್ಯಾರ್ಥಿಯ ಹೆಸರಿನಲ್ಲಿ ನೀಡಲಾದ ಗಣಕೀಕೃತ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ವಿದ್ಯಾರ್ಥಿಯು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕ್ ಖಾತೆ ಹೊಂದಿರಬೇಕು ಹಾಗೂ ಆಧಾರ್ ಸೀಡಿಂಗ್ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಆಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಭದ್ರಾವತಿ, ಇವರನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...