Friday, December 5, 2025
Friday, December 5, 2025

Guarantee scheme ರಾಜ್ಯದ ಮಹಿಳೆಯರಿಂದ 500 ಕೋಟಿ ಬಸ್ ಪ್ರಯಾಣವಾಗಿದೆ ಇದೊಂದು ಸಂತಸದ ಸಂಗತಿ- ಶಾಸಕಿ ಬಲ್ಕೀಶ ‌ಬಾನು

Date:

Guarantee scheme ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಗೆ ಅಭೂತಪೂರ್ವ ಬೆಂಬಲ ದೊರೆತಿದ್ದು, ಈವರೆಗೆ ರಾಜ್ಯದಾದ್ಯಂತ ಸುಮಾರು 500 ಕೋಟಿ ಮಹಿಳಾ ಪ್ರಯಾಣಿಕರು ಈ ಯೋಜನೆಯ ಲಾಭ ಪಡೆದಿರುವುದು ಸಂತಸದ ಸಂಗತಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕಿಶ್ಬಾನು ಅವರು ಹೇಳಿದರು.
ಅವರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮತ್ತು ಕೆ.ಎಸ್.ಆರ್.ಟಿ.ಸಿ.ಸಂಸ್ಥೆಯ ಸಹಯೋಗದೊಂದಿಗೆ ನಗರದ ರಾಜ್ಯ ರಸ್ತೆ ಸಾರಿಗೆ ಬಸ್ನಿಲ್ದಾಣದಲ್ಲಿ ಏರ್ಪಡಿಸಲಾಗಿದ್ದ ಶಕ್ತಿ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮಹಿಳೆಯರು, ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ಪ್ರಯಾಣದ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ನಾರಿಯರ ಸಬಲೀಕರಣಕ್ಕೆ ಪುಷ್ಠಿ ನೀಡಿದೆ. ರಾಜ್ಯದಾದ್ಯಂತ ಪ್ರತಿದಿನ ಸುಮಾರು 50-60ಲಕ್ಷ ಮಹಿಳೆಯರಿಗೆ ಈ ಯೋಜನೆಯ ಲಾಭ ದೊರೆಯುತ್ತಿದೆ ಎಂದರು.
ಶಕ್ತಿ ಯೋಜನೆಯ ಕುರಿತು ರಾಷ್ಟ್ರೀಯ-ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವು ಅಧ್ಯಯನಗಳು ನಡೆದಿದ್ದು ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ನೆರೆಯ ರಾಜ್ಯಗಳೂ ಕೂಡ ಈ ಯೋಜನೆಯನ್ನು ಮಾದರಿಯಾಗಿ ಇಟ್ಟುಕೊಂಡು ಅನುಷ್ಠಾನಕ್ಕೆ ಮುಂದಾಗಿರುವುದು ಯೋಜನೆಯ ಮಹತ್ವವನ್ನು ಪ್ರತಿಬಿಂಬಿಸುತ್ತದೆ. ಒಟ್ಟಾರೆಯಾಗಿ ಶಕ್ತಿ ಯೋಜನೆ ಮಹಿಳೆಯರ ಆರ್ಥಿಕ ಶಕ್ತಿಗೆ ನವಚೈತನ್ಯ ತುಂಬಿದೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದ ಅವರು, ಕಾಲಕಾಲಕ್ಕೆ ಬೆಲೆ ಏರಿಕೆಯ ಬಿಸಿ, ನಿರುದ್ಯೋಗ ಮತ್ತಿತರ ಹಲವು ಕಾರಣಗಳಿಂದಾಗಿ ಸಂಕಷ್ಟದಲ್ಲಿದ್ದ ಜನರ ಸ್ಥಿತಿಗತಿಗಳನ್ನು ಅರಿತು, ಆಡಳಿತಾರೂಢ ಸರ್ಕಾರವು ಜನರ ಆರ್ಥಿಕ, ಸಾಮಾಜಿಕ ಚೈತನ್ಯವನ್ನು ಹೆಚ್ಚಿಸುವ ಸದುದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ ಎಂಬ ಹೊಸ ಆರ್ಥಿಕ ಪ್ರಮೇಯವನ್ನು ಅಳವಡಿಸಿಕೊಂಡು ಶಕ್ತಿ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.
Guarantee scheme ಮಹಿಳೆಯರಿಗಾಗಿ ರೂಪಿಸಿ ಅನುಷ್ಠಾನಗೊಳಿಸಿರುವ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದಾಗಿ ಬಡವರಿಗೆ, ಸಾಮಾನ್ಯ ಮತ್ತು ಮಧ್ಯಮ ವರ್ಗದ ಕುಟುಂಬದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಈ ಓಡಾಟದ ವೆಚ್ಚವನ್ನು ಮನೆ ಖರ್ಚಿಗೆ ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಕುಟುಂಬ ನಿರ್ವಹಣೆಗೆ ಅನುಕೂಲವಾಗಿದೆ. ಯೋಜನೆ ರೂಪಿಸಿ ಅನುಷ್ಠಾನಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು ಎಂದು ಗಜೇಂದ್ರಘಡದ ಪ್ರಯಾಣಿಕರಾದ ಶ್ರೀಮತಿ ಜಯಶ್ರೀ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಈ ಯೋಜನೆಯು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಪುರುಷರಿಗೆ ಸಮಾನವಾಗಿ ನಿಲ್ಲುವಂತೆ ಮಾಡುವ ಪ್ರಯತ್ನಕ್ಕೆ ಸಹಕಾರಿಯಾಗಿದೆ. ದುಡಿಯುವ ಮಹಿಳೆಯರಿಗೆ ಅದರಲ್ಲೂ ಮಧ್ಯಮ ಮತ್ತು ಕೆಳವರ್ಗದ ದುಡಿಯುವ ಮಹಿಳೆಯರಿಗೆ ವರದಾನವಾಗಿದೆ ಎಂದ ಅವರು, ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಈ ಸೌಲಭ್ಯ ಜಾರಿಯಿಂದ ಸಂತಸಗೊಂಡಿದ್ದಾರೆ. ನಾಲ್ಕು ಗೋಡೆಗಳ ನಡುವೆ ಸಂಸಾರದ ಕೋಟೆಯಲ್ಲಿ ಬಂಧಿಗಳಾಗಿದ್ದ ಮಹಿಳೆಯರು ಈಗ ಗೂಡಿನಿಂದ ಹೊರಬಂದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಿ, ತೀರ್ಥಕ್ಷೇತ್ರಗಳು, ಪ್ರವಾಸಿ ತಾಣಗಳನ್ನು ವೀಕ್ಷಿಸುತ್ತಿದ್ದಾರೆ. ಮತ್ತೊಂದ ಕಡೆಗೆ ಈ ಯೋಜನೆ ವಾಣಿಜ್ಯ ಚಟುವಟಿಕೆ ಗರಿಗೆದರಲು ಅವಕಾಶ ಬಂದೊದಗಿದಂತಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ, ಡಿ.ಸಿ.ಸಿ.ಬ್ಯಾಂಕ್ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ಮುಖಂಡರಾದ ಹೆಚ್.ಸಿ.ಯೋಗೀಶ್, ಎನ್.ರಮೇಶ್, ಕೆ.ಎಸ್.ಆರ್.ಟಿ.ಸಿ. ಡಿ.ಸಿ., ನವೀನ್ಕುಮಾರ್, ಡಿ.ಟಿ.ಓ. ದಿನೇಶ್ಕುಮಾರ್ಚನ್ನಗಿರಿ, ಡಿಪೋ ವ್ಯವಸ್ಥಾಪಕ ರಾಮಚಂದ್ರ, ಜಿಲ್ಲಾ ಸಂಚಾರಿ ನಿಯಂತ್ರಕ ಎ.ವಿ.ಪ್ರಕಾಶ್ಸೇರಿದಂತೆ ಗ್ಯಾರಂಟಿ ಸಮಿತಿಯ ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳು, ಸಾರಿಗೆ ನಿಗಮ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಬಸ್ಚಾಲಕ ಮತ್ತು ನಿರ್ವಾಹಕರಿಗೆ ಗೌರವಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...