Thursday, September 17, 2026
Thursday, September 17, 2026

ರಾಜ್ಯ ಸರ್ಕಾರಿ ನೌಕರರ ಸಂಘದ ಷಡಾಕ್ಷರಿ ಅವರಿಂದ ನಗರಾಭಿವೃದ್ಧಿ ಸಚಿವರ ಭೇಟಿ

Date:

ಕಳೆದ ವಾರ ಕರ್ನಾಟಕ ರಾಜ್ಯದ ಮಹಾನಗರ ಪಾಲಿಕೆ ನೌಕರರು ಅನಿರ್ದಿಷ್ಟ ಅವಧಿ ಮುಷ್ಕರವನ್ನು ಕೈಗೊಂಡಿದ್ದರು

ಈ ಸಂದರ್ಭದಲ್ಲಿ ಮುಷ್ಕರವನ್ನು ಹಿಂಪಡೆಯಲು ಸನ್ಮಾನ್ಯ ಮುಖ್ಯಮಂತ್ರಿಗಳು
ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್ ಷಡಾಕ್ಷರಿ ರವರಿಗೆ ಸೂಚಿಸಿ ಅವರ ಬೇಡಿಕೆಗಳನ್ನು ಇಡೇರಿಸುವ ಭರವಸೆ ನೀಡಿದ ಮೇರೆಗೆ ಬೆಂಗಳೂರು ಮಹಾನಗರ ಪಾಲಿಕೆಯ ನೌಕರರು ಮುಷ್ಕರ ವಾಪಸ್ ಪಡೆಯಲಾಗಿತ್ತು

ಮಾನ್ಯ ನಗರಾಭಿವೃದ್ಧಿ ಸಚಿವರಾದ ಶ್ರೀ ಭೈರತಿ ಸುರೇಶ್ ರವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್ ಷಡಾಕ್ಷರಿ ರವರು ಹಾಗೂ ಬೆಂಗಳೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ಶ್ರೀ ಅಮೃತ್ ರಾಜ್ ರವರ ನಿಯೋಗವು ಸಭೆ ನಡೆಸಿದರು.

ಸಭೆಯಲ್ಲಿ ಮಾನ್ಯ ಸಚಿವರು ಮತ್ತು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಮಹಾನಗರ ಪಾಲಿಕೆಯ ನೌಕರರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್ ಷಡಾಕ್ಷರಿ ರವರ ನಿಯೋಗ ಹಾಗೂ ಬೆಂಗಳೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ಶ್ರೀ ಅಮೃತ್ ರಾಜ್ ರವರ ನಿಯೋಗವು ಮಾನ್ಯ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್ ರವರಿಗೆ ಸನ್ಮಾನಿಸಿ ಅಭಿನಂದಿಸಿದರು

ಕರ್ನಾಟಕ ಸರ್ಕಾರದ ಸಚಿವಾಲಯ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ರಮೇಶ್ ಸಂಗಾ ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...