Department of Soldiers Welfare and Rehabilitation ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ, 2025-26 ನೇ ಸಾಲಿನ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಮೂಲ ನಿವಾಸಿ ಮಕ್ಕಳಿಗೆ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಜಿಲ್ಲಾ ಕಚೇರಿಯಲ್ಲಿ ಶುಲ್ಕ ರಹಿತವಾಗಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 30, 2025 ರೊಳಗಾಗಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182220925 ಗೆ ಸಂಪರ್ಕಿಸುವುದು .
