Rotary Club ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಅವಶ್ಯ. ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆಯು ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯ ನೆರವು ನೀಡುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ ಬಿ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ವಿನೋಬನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತ ಊಟದ ತಟ್ಟೆ ಹಾಗೂ ಕೈ ಲೋಟ ಮತ್ತು ಲೇಖನ ಸಾಮಗ್ರಿ ವಿತರಿಸಿ ಮಾತನಾಡಿ, ಮಕ್ಕಳಿಗೆ ಅಗತ್ಯ ವಸ್ತುಗಳನ್ನು ರೋಟರಿ ಕ್ಲಬ್ ಸೆಂಟ್ರಲ್ ಸದಸ್ಯ ನಾರಾಯಣಮೂರ್ತಿ ನೀಡಿದ್ದು, ಇದೇ ರೀತಿ ಸರ್ಕಾರಿ ಶಾಲೆಗಳ ಮೂಲಸೌಕರ್ಯಕ್ಕೆ ದಾನಿಗಳು ಹೆಚ್ಚಿನ ನೆರವು ನೀಡಬೇಕು ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸದಸ್ಯ ನಾರಾಯಣ ಮೂರ್ತಿ ಮಾತನಾಡಿ, ರೋಟರಿ ಸಂಸ್ಥೆಯಿಂದ ನಿರಂತರ ಸೇವಾ ಕಾರ್ಯಗಳು ನಡೆಯುತ್ತಿದ್ದು, ಇಂತಹ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಲ್ಲಿ ಸದಸ್ಯರಾಗಿರುವುದು ಹೆಮ್ಮೆ ಎಂದು ತಿಳಿಸಿದರು.
ವಲಯ ಸೇನಾನಿ ಕಿರಣ್ ಕುಮಾರ್ ಜಿ ಮಾತನಾಡಿ, ರೋಟರಿ ಜಿಲ್ಲಾ ಕಾರ್ಯಕ್ರಮವಾದ ಶಿಕ್ಷಣದ ಅಡಿಯಲ್ಲಿ ರೋಟರಿ ಸಂಸ್ಥೆಯು ಸರ್ಕಾರಿ ಶಾಲೆಗಳ ಕುಂದು ಕೊರತೆಗಳನ್ನು ಪರಿಹರಿಸಲು ಶ್ರಮಿಸುತ್ತಿದೆ ಎಂದರು.
ಆನ್ಸ್ ಕ್ಲಬ್ ಅಧ್ಯಕ್ಷೆ ರಾಜಶ್ರೀ ಬಸವರಾಜ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಅಗತ್ಯ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.
Rotary Club ಕಾರ್ಯದರ್ಶಿ ಜಯಶೀಲಶೆಟ್ಟಿ, ಮಾಜಿ ಸಹಾಯಕ ಗವರ್ನರ್ ರವಿ ಕೊಟೊಜಿ, ಧರ್ಮೇಂದ್ರ ಸಿಂಗ್, ಗುರುರಾಜ್, ರಮೇಶ, ಸಂತೋಷ್, ಮೋಹನ್, ಗೀತಾ ಜಗದೀಶ್, ಜ್ಯೋತಿ ಶ್ರೀರಾಮ್, ದೀಪಾ ಶೆಟ್ಟಿ, ವಿನುತ ಅಶ್ವಿನ್ ಹಾಗೂ ಆನ್ ಕ್ಲಬ್ ಕಾರ್ಯದರ್ಶಿ ಮಥುರಾ ಧನಂಜಯ್ ಹಾಗೂ ಶಾಲಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Rotary Club ಸರ್ಕಾರಿ ಶಾಲೆಯ ಮಕ್ಕಳಿಗೆ ಮೂಲ ಸೌಕರ್ಯ ಒದಗಿಸುವುದು ಅವಶ್ಯ-ಬಿ.ಬಸವರಾಜ್
Date:
