Wednesday, May 6, 2026
Wednesday, May 6, 2026

E-Pauti ಜಮೀನು ಮಾಲೀಕರು ಮೃತರಾದಲ್ಲಿ , ವಾರಸುದಾರರಿಗೆ ಹಕ್ಕು ಬದಲಾಯಿಸುವ”ಇ- ಪೌತಿ” ಆಂದೋಲನ- ಶಿವಮೊಗ್ಗ ತಹಶೀಲ್ದಾರ್ ವಿ.ಎಸ್.ರಾಜೀವ್

Date:

E-Pauti ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಈ ಜಮೀನಿನ ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ.

E-Pauti ಈ ರೀತಿಯ ಜಮೀನುಗಳನ್ನು ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ ವಾರಸುದಾರರ ಆಧಾರ್ ಕಾರ್ಡ್ ಇತ್ಯಾದಿ ಪೂರಕ ಎಲ್ಲಾ ದಾಖಲೆಗಳನ್ನು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ಸಲ್ಲಿಸಿ ಭೂ ಮಾಲೀಕರು ಮೃತರಾಗಿರುವ ಜಮೀನುಗಳ ವಾರಸುದಾರರಿಗೆ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನದ ಮೂಲಕ ಪಹಣಿ ಮಾಡಿಸಿಕೊಳ್ಳಬಹುದಾಗಿರುತ್ತದೆ. ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ತಾಲೂಕಿನ ಎಲ್ಲಾ ಗ್ರಾಮಗಳ ಸಾರ್ವಜನಿಕರು ಇ-ಪೌತಿ ಆಂದೋಲನದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ರಾಜೀವ್ ವಿ.ಎಸ್. ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...