Wednesday, May 6, 2026
Wednesday, May 6, 2026

University of Mysore ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯ‌ ಕಲಾ ಕಾಲೇಜಿಗೆ ಪ್ರವೇಶಾತಿ ಪ್ರಕಟಣೆ

Date:

University of Mysore ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) 4 ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ.ಪದ್ಧತಿಯ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ. ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿಯುಸಿ ಪರೀಕ್ಷೆ -2 ಮತ್ತು 3 ರಲ್ಲಿ ಉತ್ತೀರ್ಣರಾದ ಹಾಗೂ ದ್ವಿತೀಯ ಪಿಯುಸಿಗೆ ಸಮಾನಾಂತರ ಕೋರ್ಸ್ ಮಾಡಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
University of Mysore ಈ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತರು ಕರ್ನಾಟಕ ಸರ್ಕಾರದ ಅಂತರ್ಜಾಲ ತಾಣ https://uucms.karnataka.gov.in ಅಥವಾ https:/www.cavamysore.karnataka.gov.in ಮೂಲಕ ಜು. 30ರೊಳಗಾಗಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಗಳನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಕಾಲೇಜಿನ ಡೀನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...