S.N.Chennabasappa ಶಿವಮೊಗ್ಗದ ಬಾಪೂಜಿನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದಲ್ಲಿ ನಡೆದ “ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಸಮಗ್ರ ಜಾಗತಿಕ ಅಭಿವೃದ್ಧಿಗಾಗಿ ಮತ್ತು ಡಿಜಿಟಲ್ ವೇದಿಕೆಗಳನ್ನು ಬಳಸಿಕೊಳ್ಳುವುದರ ಕುರಿತು ಆಯೋಜಿಸಲಾಗಿದ್ದ ಅರ್ಥಪೂರ್ಣ ಜ್ಞಾನವರ್ಧಕ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.
ಡಿಜಿಟಲ್ ಯುಗದ ಪ್ರಮುಖ ಆಯಾಮವಾದ ಕೃತಕಬುದ್ಧಿಮತ್ತೆ (AI) ಇಂದು ಶಿಕ್ಷಣ, ಆರೋಗ್ಯ, ಕೃಷಿ, ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಕ್ರಾಂತಿಕಾರಿ ಬದಲಾವಣೆಗಳನ್ನು ತರುತ್ತಿದ್ದು, ಈ ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಲ್ಲಿ AI ಬಗ್ಗೆ ಅರಿವು ಹೆಚ್ಚಿಸಿ, ಭವಿಷ್ಯದ ಕೌಶಲ್ಯಗಳಿಗೆ ಸಿದ್ಧರಾಗುವಂತೆ ಪ್ರೇರಣೆಯಾಗುವಂತಿತ್ತು.
S.N.Chennabasappa ಕಾರ್ಯಕ್ರಮದಲ್ಲಿ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್ ಹಾಗೂ ಡಾ. ಧನಂಜಯ್ ಸರ್ಜಿ, ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದ ಪ್ರಾಧ್ಯಾಪಕರು, ವಿಷಯ ತಜ್ಞರು, ಶಿಕ್ಷಕ ವೃಂದ, ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
