Ministry of Tribal Affairs ಧರ್ತಿ ಆಬಾ ಜನ್ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಆಬಾ ಜನ್ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ವಿರೂಪಿನಕೊಪ್ಪ ಹಾಗೂ ಬಿ.ಬೀರನಹಳ್ಳಿ ಗ್ರಾಮ ಪಂಚಾಯಿತಿಯ ಸದಾಶಿವಪುರ ಗ್ರಾಮಗಳನ್ನು ಗುರುತಿಸಲಾಗಿದೆ.
ಈ ಗ್ರಾಮಗಳನ್ನು ಅಭಿವೃದ್ಧಿಪಡಿಸಿ, ಪ್ರವಾಸಿಗರಿಗೆ ಅನುಕೂಲವಾಗುವಂತೆ ಹೋಂಸ್ಟೇ ನಿರ್ಮಿಸಲು ರೂ. 5.00 ಲಕ್ಷ ಹಾಗೂ ನವೀಕರಿಸಲು ರೂ. 3.00 ಲಕ್ಷಗಳ ಸಹಾಯಧನ ನೀಡುವ ಯೋಜನೆಯನ್ನು ಪ್ರವಾಸೋದ್ಯಮ ಇಲಾಖೆಯು ಅನುಷ್ಠಾನಗೊಳಿಸುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
Ministry of Tribal Affairs ಈ ಯೋಜನೆಯನ್ನು ಉಪಯೋಗಿಸಿಕೊಳ್ಳಲು ಆಸಕ್ತರಾಗಿರುವ ಅರ್ಹ ವ್ಯಕ್ತಿ/ ಕುಟುಂಬದವರು ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಇಲಾಖಾ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ, ಮನೆಯ ದಾಖಲೆ, ಮನೆಯ ಪೋಟೋ, ಡಿಕ್ಷರೇಷನ್ ಫಾರಂ, ಗ್ರಾ.ಪಂ. ಎನ್‌ಓಸಿ ದಾಖಲೆಗಳ ಜೇರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಆಗಸ್ಟ್ 11 ರೊಳಗಾಗಿ ಸಲ್ಲಿಸುವಂತ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರೂ ಆಗಿರುವ ಗುರುದತ್ತ ಹೆಗಡೆರವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444/7026296510 ಗಳನ್ನು ಸಂಪರ್ಕಿಸುವುದು.
