Saturday, December 6, 2025
Saturday, December 6, 2025

DC Shivamogga ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಿಂದ ತ್ಯಾಜ್ಯ ವಿಸರ್ಜನೆ, ದುಷ್ಪರಿಣಾಮ ತಪ್ಪಿಸಲು ತ್ಯಾಜ್ಯ ವಿಲೇಕ್ರಮ ಕೈಗೊಳ್ಳಬೇಕು- ಡೀಸಿ ಗುರುದತ್ತ ಹೆಗಡೆ

Date:

DC Shivamogga ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಿಂದ ಉತ್ಪಾದನೆಗೊಳ್ಳುತ್ತಿರುವ ಭಾರೀ ಪ್ರಮಾಣದ ರಸಾಯನಿಕ ಮಿಶ್ರಿತ ಮರಳು ತ್ಯಾಜ್ಯದಿಂದ ಪರಿಸರದ ಮೇಲೆ ದುಷ್ಪರಿಣಾಮಗಳಾಗುತ್ತಿರುವುದಲ್ಲದೇ ಅಂತರ್ಜಲದಲ್ಲಿ ಸೇರ್ಪಡೆಯಾಗುತ್ತಿರುವ ಸಾಧ್ಯತೆ ಹೆಚ್ಚಾಗುತ್ತಿರುವುದರಿಂದ ಘನತ್ಯಾಜ್ಯವನ್ನು ವ್ಯವಸ್ಥಿತವಾಗಿ ಸಂಸ್ಕರಿಸಿ, ವಿಲೇ ಮಾಡಬಹುದಾದ ಆಧುನಿಕ ವಿಧಾನಗಳ ಬಗ್ಗೆ ಅರಿತು ಅಳವಡಿಸಿಕೊಳ್ಬಬಹುದಾದ ತುರ್ತು ಅನಿವಾರ್ಯತೆ ಇದೆ ಎಂದು ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಹೇಳಿದರು.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ 193ನೇ ಏಕಗವಾಕ್ಷಿ ಸಮಿತಿ ಹಾಗಹೂ ಕೈಗಾರಿಕಾ ಸ್ಪಂದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿನ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಪಡಿಸಿ, ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವ ಬಗ್ಗೆ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಕೆ.ಐ.ಎ.ಡಿ.ಬಿ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಆಟೋಕಾಂಪ್ಲೆಕ್ಸ್‌ಮತ್ತು ಸಾಗರ ರಸ್ತೆ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಮಹಾನಗರಪಾಲಿಕೆಯ ಅಧಿಕಾರಿಗಳು ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಕಲ್ಲೂರು ಮಂಡ್ಲಿ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್‌ಉಪಕೇಂದ್ರ ಸ್ಥಾಪಿಸಲು ಅಗತ್ಯವಾಗಿರುವ ಭೂಮಿಯನ್ನು ಗುರುತಿಸಲು ತಹಶೀಲ್ದಾರರಿಗೆ ಸೂಚಿಸಿದ ಅವರು, ಭದ್ರಾವತಿ ಮತ್ತು ಮಾಚೇನಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳು ಕ್ರಮಕೈಗೊಳ್ಳಲು ಸೂಚಿಸಿದರು.
DC Shivamogga ಕೆ.ಎಸ್.ಎಸ್.ಐ.ಡಿ.ಸಿ.,ಸಿದ್ಲೀಪುರ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಹೆಚ್ಚುವರಿ ವಿದ್ಯುತ್‌ಶುಲ್ಕ ಪಡೆಯುತ್ತಿರುವ ಬಗ್ಗೆ ಪರಿಶೀಲಿಸಲಾಗಿ, ಈ ಸಮಸ್ಯೆಯ ಇತ್ಯರ್ಥಗೊಳಿಸುವ ಮುನ್ನ ಸದರಿ ಕೈಗಾರಿಕಾ ಪ್ರದೇಶದ ಕೈಗಾರಿಕೋದ್ಯಮಿಗಳು ಮನವಿ ಸಲ್ಲಿಸಿದಲ್ಲಿ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು, ಶುಲ್ಕ ಪಾವತಿಸಲು ವಿನಾಯಿತಿ ನೀಡಬಹುದೆ ಅಥವಾ ಮೇಲಾಧಿಕಾರಿಗಳ ಗಮನಸೆಳೆದು ವಿನಾಯಿತಿ ನೀಡುವಂತೆ ಮನವಿ ಮಾಡುವ ಬಗ್ಗೆ ಪರಿಶೀಲಿಸುವುದಾಗಿ ಅವರು ತಿಳಿಸಿದರು.
ಸಾಗರ ರಸ್ತೆಯ ಕೆ.ಎಸ್.ಎಸ್.ಐ.ಡಿ.ಸಿ. ಕೈಗಾರಿಕಾ ವಸಾಹತು ಶಿವಮೊಗ್ಗ ಮಹಾನಗರಪಾಲಿಕೆಗೆ ಹಸ್ತಾಂತರವಾಗಿದ್ದು, ಸದರಿ ಕೈಗಾರಿಕಾ ಪ್ರದೇಶದ ನಿರ್ವಹಣೆಯಲ್ಲಿ ತೀವ್ರತರಹದ ನ್ಯೂನತೆಗಳಿರುವುದನ್ನು ಕೈಗಾರಿಕಾ ಸಂಘದ ಪದಾಧಿಕಾರಿಗಳು ಗಮನಸೆಳೆದಾಗ, ಪಾಲಿಕೆಯ ಪರಿಸರ ಅಧಿಕಾರಿಗಳು ಕೂಡಲೇ ಅಲ್ಲಿನ ಸಮರ್ಪಕ ಕಸವಿಲೇವಾರಿಯಲ್ಲಿ ವಿಶೇಷ ಗಮನಸೆಳೆಯುವಂತೆ ಸೂಚಿಸಿದ ಅವರು, ಸ್ಥಳೀಯ ಪ್ರದೇಶದ ಕೈಗಾರಿಕಾ ಸಂಘದ ಪದಾಧಿಕಾರಿಗಳು ಆಂತರಿಕ ಸಭೆ ನಡೆಸಿ, ಅಲ್ಲಿ ಕೈಗೊಳ್ಳಬಹುದಾದ ಸುಧಾರಣಾ ಕ್ರಮಗಳ ಬಗ್ಗೆಯೂ ಚರ್ಚಿಸುವಂತೆ ಅವರು ಸೂಚಿಸಿದರು.
ಸಾಗರ ರಸ್ತೆ ಕೈಗಾರಿಕಾ ಪ್ರದೇಶದಲ್ಲಿ ವಾಹನಗಳ ನಿಲುಗಡೆಯಿಂದಾಗಿ ಆಕಸ್ಮಿಕ ಅಪಘಾತಗಳು ಉಂಟಾಗುತ್ತಿವೆ. ಆದ್ದರಿಂದ ವಾಹನಗಳ ನಿಲುಗಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ. ಅಲ್ಲಿನ ಕಸ ವಿಲೇವಾರಿ ಬಗ್ಗೆಯೂ ಪಾಲಿಕೆ ಅಧಿಕಾರಿಗಳು ಗಮನಹರಿಸುವಂತೆ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಸೆಳೆದರು. ಆಟೋ ಕಾಂಪ್ಲೆಕ್ಸ್‌ನಲ್ಲಿರುವ ಪ್ರತಿ ಕೈಗಾರಿಕಾ ಘಟಕಗಳಿಗೆ ಪ್ರತ್ಯೇಕ ಯು.ಜಿ.ಡಿ.ಸಂಪರ್ಕ ಕಲ್ಪಿಸಿಕೊಳ್ಳಲು ನೋಟೀಸ್‌ಜಾರಿಗೊಳಿಸುವಂತೆಯೂ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಪ್ರೊಬೇಷನರ್‌ಜಿಲ್ಲಾಧಿಕಾರಿ ನಾಗೇಂದ್ರಕುಮಾರ್‌ಬಾಬು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯದರ್ಶಿ ಶ್ರೀಮತಿ ಸುಜಾತಾ, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್‌, ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ರಾಮಾಚಾರ್‌, ಬೆನಕಪ್ಪ, ಮಲ್ಲಿಕಾರ್ಜುನ, ಗೇವರ್‌ಚಂದ್‌, ರಮೇಶ್‌ಹೆಗ್ಡೆ, ಜಿಲ್ಲಾ ಕೈಗಾರಿಕಾ ಸಂಘದ ಜಂಟಿ ನಿರ್ದೇಶಕ ಗಣೇಶ್‌, ಉಪನಿರ್ದೇಶಕ ಸುರೇಶ್‌ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...